ಕಲ್ಲಿದ್ದಲು ಹಗರಣ: ಮಾಜಿ ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ

ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 
ಜೈಲು ಶಿಕ್ಷೆ (ಸಾಂಕೇತಿಕ ಚಿತ್ರ)
ಜೈಲು ಶಿಕ್ಷೆ (ಸಾಂಕೇತಿಕ ಚಿತ್ರ)

ನವದೆಹಲಿ: ಕಲ್ಲಿದ್ದಲು ಹಗರಣದಲ್ಲಿ ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 

ರೌಸ್ ಅವಿನ್ಯೂ ಕೋರ್ಟ್ ಈ ತೀರ್ಪು ಪ್ರಕಟಿಸಿದ್ದು, ಮಹಾರಾಷ್ಟ್ರ ಕಲ್ಲಿದ್ದಲು ಬ್ಲಾಕ್ ನ್ನು ನಾಗ್ಪುರದ ಖಾಸಗಿ ಕಂಪನಿಗೆ ಹಂಚಿಕೆ ಮಾಡುವಾಗ ಅಕ್ರಮ ಎಸಗಿದ್ದ ಆರೋಪ ಮಾಜಿ ಕಲ್ಲಿದ್ದಲು ಕಾರ್ಯದರ್ಶಿಯ ವಿರುದ್ಧ ಸಾಬೀತಾಗಿತ್ತು. 

ಕೋರ್ಟ್, ಕಲ್ಲಿದ್ದಲು ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಕೆಎಸ್ ಕ್ರೋಫಾ ಅವರಿಗೂ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರೆ, ಖಾಸಗಿ ಸಂಸ್ಥೆಯ ನಿರ್ದೇಶಕ ಮಹೇಶ್ ಗುಪ್ತಾಗೆ 4 ವರ್ಷಗಳ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ಕಳೆದ ವಾರ ಇವರನ್ನು ದೋಷಿಗಳೆಂದು ಕೋರ್ಟ್ ತೀರ್ಪು ಪ್ರಕಟಿಸಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com