ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಹುತಾತ್ಮರು, ಸ್ವಾತಂತ್ರ್ಯ ಹೋರಾಟಗಾರರಿಗೆ ಲೋಕಸಭೆ ಶ್ರದ್ಧಾಂಜಲಿ
ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ್ದ ಕ್ವಿಟ್ ಇಂಡಿಯಾ ಚಳವಳಿ ನಡೆದ ಇಂದಿಗೆ 80 ವರ್ಷ. ಈ ಹಿನ್ನೆಲೆಯಲ್ಲಿ ಲೋಕಸಭೆಯು ಸೋಮವಾರ ಸ್ವಾತಂತ್ರ್ಯ ಚಳವಳಿಯಲ್ಲಿ ಹುತಾತ್ಮರಾದವರಿಗೆ ಮತ್ತು ಸ್ವಾತಂತ್ರ್ಯ....
Published: 08th August 2022 02:56 PM | Last Updated: 08th August 2022 02:56 PM | A+A A-

ಸಂಸತ್ ಭವನ
ನವದೆಹಲಿ: ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ್ದ ಕ್ವಿಟ್ ಇಂಡಿಯಾ ಚಳವಳಿ ನಡೆದ ಇಂದಿಗೆ 80 ವರ್ಷ. ಈ ಹಿನ್ನೆಲೆಯಲ್ಲಿ ಲೋಕಸಭೆಯು ಸೋಮವಾರ ಸ್ವಾತಂತ್ರ್ಯ ಚಳವಳಿಯಲ್ಲಿ ಹುತಾತ್ಮರಾದವರಿಗೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿತು.
ವಾರಾಂತ್ಯದ ವಿರಾಮದ ನಂತರ ಇಂದ ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು 80 ವರ್ಷಗಳ ಹಿಂದೆ ಇದೇ ದಿನದಂದು ಮಹಾತ್ಮ ಗಾಂಧಿಯವರು ಆಗಸ್ಟ್ 15, 1947 ರಂದು ಭಾರತಕ್ಕೆ ಸ್ವಾತಂತ್ರ್ಯವನ್ನು ಪಡೆಯಲು ಕಾರಣವಾದ ಕ್ವಿಟ್ ಇಂಡಿಯಾ ಚಳುವಳಿಯನ್ನು ಪ್ರಾರಂಭಿಸಿದರು.
ಇದನ್ನು ಓದಿ: ಸ್ವಾರಸ್ಯಕರ, ಒನ್ ಲೈನರ್ ನೆನೆದು ಉಪರಾಷ್ಟ್ರಪತಿ ನಾಯ್ಡುಗೆ ರಾಜ್ಯಸಭೆಯಲ್ಲಿ ಬೀಳ್ಕೊಡುಗೆ: ಪ್ರಧಾನಿಯಿಂದ ವಂದನಾರ್ಪಣೆ
"ಇದು ಭಾರತಕ್ಕೆ ಸ್ವಾತಂತ್ರ್ಯ ಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದೆ" ಎಂದು ಸ್ವೀಕರ್ ಹೇಳಿದರು.
ಹುತಾತ್ಮ ಯೋಧರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಅವರ ತ್ಯಾಗ ಬಲಿದಾನಗಳು ಪ್ರತಿಯೊಬ್ಬರಿಗೂ ಸಮರ್ಪಣಾ ಭಾವದಿಂದ ದೇಶ ಸೇವೆ ಮಾಡಲು ಪ್ರೇರಣೆ ನೀಡುತ್ತದೆ ಎಂದರು.
ಆಗಸ್ಟ್ 8, 1942 ರಂದು ಮಹಾತ್ಮಾ ಗಾಂಧಿಯವರು ಪ್ರಾರಂಭಿಸಿದ ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷರು ದೇಶ ತೊಲಗಲು ಕಾರಣವಾಯಿತು.
ಈ ಚಳುವಳಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಬಾಂಬೆ ಅಧಿವೇಶನದಲ್ಲಿ ಪ್ರಾರಂಭಿಸಲಾಯಿತು ಮತ್ತು ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸಲು ಮಹಾತ್ಮಾ ಗಾಂಧಿಯವರು ಮಾಡು ಇಲ್ಲವೇ ಮಡಿ ಎಂದು ಕರೆ ನೀಡಿದರು.