ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 42 ಜನರು ಸೋಂಕಿನಿಂದ ಸಾವು
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, 42 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Published: 09th August 2022 11:30 AM | Last Updated: 09th August 2022 11:30 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,751 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,41,74,650 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 42 ಜನರು ಸಾವಿಗೀಡಾಗುವುದರೊಂದಿಗೆ ಈವರೆಗೆ 5,26,772 ಜನರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಬೆಂಗಳೂರು 655 ಸೇರಿ 1,019 ಹೊಸ ಪ್ರಕರಣ ಪತ್ತೆ; 3 ಸಾವು
ಒಟ್ಟು ಸೋಂಕು ಪ್ರಕರಣಗಳ ಪೈಕಿ 0.30ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.51ರಷ್ಟಾಗಿದೆ. ಇದೇ ವೇಳೆ ದೈನಂದಿನ ಪಾಸಿಟಿವಿಟಿ ದರ ಶೇ 3.50 ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
#COVID19 | India reports 12,751 fresh cases and 16,412 recoveries in the last 24 hours.
— ANI (@ANI) August 9, 2022
Active cases 1,31,807
Daily positivity rate 3.50% pic.twitter.com/apGESAkCVP
ದೇಶದಲ್ಲಿ ಈವರೆಗೆ 4,35,16,071 ಜನರು ಗುಣಮುಖರಾಗಿದ್ದಾರೆ. ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಈವರೆಗೆ 206.88 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.