ನೂತನ ನಿತೀಶ್ ಕುಮಾರ್ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನ ಗಿಟ್ಟಿಸುವ ಸಾಧ್ಯತೆ

ಜೆಡಿಯು ಮುಖಂಡ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆಗೆ ಕೈ ಜೋಡಿಸುವುದರಿಂದ ಬಿಹಾರದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ನಿತೀಶ್ ಕುಮಾರ್, ತೇಜಸ್ವಿ ಯಾದವ್ ಮತ್ತಿತರರು
ನಿತೀಶ್ ಕುಮಾರ್, ತೇಜಸ್ವಿ ಯಾದವ್ ಮತ್ತಿತರರು

ನವದೆಹಲಿ: ಜೆಡಿಯು ಮುಖಂಡ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆಗೆ ಕೈ ಜೋಡಿಸುವುದರಿಂದ ಬಿಹಾರದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೂಡಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಕುಮಾರ್ ಮಾತನಾಡಿದ್ದು, ನೂತನ ಸರ್ಕಾರ ರಚನೆಗೆ ಬೆಂಬಲ ನೀಡುವುದಕ್ಕೆ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ಕು ಸ್ಥಾನಗಳಲ್ಲದೇ ವಿಧಾನಸಭಾ ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್ ಬಯಸಿದೆ ಆದರೆ, ಕುಮಾರ್ ಅದನ್ನು ಬಿಟ್ಟು ಕೊಡಲು ಸಿದ್ಧರಿಲಿಲ್ಲ ಎಂದು ಮೂಲಗಳು ಹೇಳಿವೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 19 ಕಾಂಗ್ರೆಸ್ ಶಾಸಕರಿದ್ದರೆ ಜೆಡಿಯು 45, ಆರ್ ಜೆಡಿ 79, ಸಿಪಿಐ (ಎಂಎಲ್ ) 12, ಸಿಪಿಐ ಮತ್ತು ಸಿಪಿಐ(ಎಂ) ತಲಾ ಎರಡು ಶಾಸಕರನ್ನು ಹೊಂದಿದೆ.

ಬಿಜೆಪಿಯ 77 ಶಾಸಕರಿದ್ದಾರೆ. ಜಿತಿನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ 4, ಒಬ್ಬರು ಪಕ್ಷೇತರ ಶಾಸಕರಿದ್ದು, ಒಂದು ಸ್ಥಾನ ತೆರವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com