ತುರ್ತು ವಾಟ್ಸಾಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೀವ ಬೆದರಿಕೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 09th August 2022 12:42 PM | Last Updated: 09th August 2022 12:42 PM | A+A A-

ಯೋಗಿ ಆದಿತ್ಯಾನಾಥ್
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಯಲ್-112 ಸಹಾಯವಾಣಿಯ ವಾಟ್ಸಾಪ್ ಸಂಖ್ಯೆಗೆ ಶಾಹಿದ್ ಎಂಬ ವ್ಯಕ್ತಿಯಿಂದ ಸಂದೇಶ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವ್ಯಕ್ತಿಗೆ ಮುಖ್ಯಮಂತ್ರಿ ಯೋಗಿ ಅವರಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಇಲ್ಲಿನ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಸ್ಟೇಷನ್ ಕಮಾಂಡರ್ ಸುಭಾಷ್ ಕುಮಾರ್ ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಯ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಸೈಬರ್ ಸೆಲ್ ಮತ್ತು ಕಣ್ಗಾವಲು ತಂಡಗಳು ಸಹ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.