ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. 
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. 

ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ 160 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು.

ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com