ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಮತ್ತೆ ಕೊರೋನಾ ಪಾಸಿಟಿವ್
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.
Published: 10th August 2022 10:34 AM | Last Updated: 10th August 2022 10:34 AM | A+A A-

ಪ್ರಿಯಾಂಕ ಗಾಂಧಿ ವಾದ್ರಾ
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮತ್ತೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದಾರೆ.
Tested positive for covid (again!) today. Will be isolating at home and following all protocols.
— Priyanka Gandhi Vadra (@priyankagandhi) August 10, 2022
ಈ ಹಿಂದೆ ತಮ್ಮ ತಾಯಿ ಸೋನಿಯಾ ಗಾಂಧಿಯವರು ಕಳೆದ ಜೂನ್ ತಿಂಗಳಲ್ಲಿ ಕೊರೋನಾ ಸೋಂಕಿಗೆ ತುತ್ತಾಗುವ ಮುನ್ನ ಕೋವಿಡ್ ವೈರಸ್ ದಾಳಿಗೆ ತುತ್ತಾಗಿದ್ದರು. ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿ ಮನೆಯಲ್ಲಿ ಹೋಂ ಐಸೊಲೇಟ್ ಆಗುತ್ತೇನೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ಇಂದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16 ಸಾವಿರದ 047 ಹೊಸ ಕೊರೋನಾ ವೈರಸ್ ಕೇಸುಗಳು ದಾಖಲಾಗಿದ್ದು 54 ಮಂದಿ ಬಲಿಯಾಗಿದ್ದಾರೆ. ನಿನ್ನೆ ತಮಗೆ ಕೊರೋನಾ ಸೋಂಕು ತಗುಲಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದರು.
I have tested positive for #COVID19.
— Mallikarjun Kharge (@kharge) August 9, 2022
I request those who came in contact with me recently to to take care.