ಕೋವಿಡ್-19: ದೇಶದಲ್ಲಿ 16,299 ಹೊಸ ಕೊರೊನಾ ಸೋಂಕು ಪ್ರಕರಣ, 53 ಜನ ಸಾವು
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 16,299 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,42,06,996 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
Published: 11th August 2022 10:51 AM | Last Updated: 11th August 2022 01:18 PM | A+A A-

ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 16,299 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,42,06,996 ಕ್ಕೆ ಏರಿಕೆಯಾಗಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,25,076 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಇದೇ ಅವಧಿಯಲ್ಲಿ 53 ಜನರು ಸಾವಿಗೀಡಾಗಿದ್ದು, ಈ ಪೈಕಿ ನಾಲ್ಕು ಸಾವುಗಳು ಕೇರಳದಿಂದ ವರದಿಯಾಗಿವೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಾದ ಅಂಕಿಅಂಶಗಳು ತಿಳಿಸಿವೆ.
ಇದನ್ನೂ ಓದಿ: ಕೊರೊನಾ ಬೂಸ್ಟರ್ ಡೋಸ್ ಆಗಿ ಕೊರ್ಬೆವ್ಯಾಕ್ಸ್: ಕೇಂದ್ರ ಅನುಮೋದನೆ
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.28ರಷ್ಟು ಸಕ್ರಿಯ ಪ್ರಕರಣಗಳಿವೆ. ಆದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.53 ರಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 4.94ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ಇನ್ನು ಸೋಂಕಿನಿಂದ ಈವರೆಗೆ 4,35,55,041 ಜನರು ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ: ಹೆಚ್ಚು ವೇಗವಾಗಿ ಹರಡಬಲ್ಲ ಕೊರೊನಾ ವೈರಾಣು ರೂಪಾಂತರ ಓಮೈಕ್ರಾನ್‌ನ ಉಪತಳಿ ದೆಹಲಿಯಲ್ಲಿ ಪತ್ತೆ!
ಲಸಿಕೆ ಅಭಿಯಾನದ ಮೂಲಕ ದೇಶದಲ್ಲಿ ಈವರೆಗೆ 207.29 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.