ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ: ನಿತೀಶ್ ಕುಮಾರ್
ಪ್ರಧಾನಿ ಹುದ್ದೆಯ ಆಕಾಂಕ್ಷಿ ನಾನಲ್ಲ. ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.
Published: 12th August 2022 03:10 PM | Last Updated: 12th August 2022 03:10 PM | A+A A-

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಪಾಟ್ನಾ: ಪ್ರಧಾನಿ ಹುದ್ದೆಯ ಆಕಾಂಕ್ಷಿ ನಾನಲ್ಲ. ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.
ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಂತರ ರಾಜಕೀಯ ಬಿರುಗಾಳಿಯನ್ನು ಉಂಟುಮಾಡಿದ್ದು, ನಿತೀಶ್ ಕುಮಾರ್ ಅವರು ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳು ತಮ್ಮ ಮನಸ್ಸಿನಲ್ಲಿಲ್ಲ ಎಂದಿದ್ದಾರೆ.
ಇದನ್ನು ಓದಿ: ಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಸಿಎಂ, ನನಗೆ ಪ್ರಧಾನಿಯಾಗುವ ಯಾವುದೇ ಆಲೋಚನೆ ಇಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಆಗಸ್ಟ್ 10 ರಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ನಿತೀಶ್ ಕುಮಾರ್ ಅವರು ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು 2014 ರಲ್ಲಿ ಗೆದ್ದಿದ್ದಾರೆ, ಆದರೆ ಅವರು 2024 ರಲ್ಲಿ ಗೆಲ್ಲುತ್ತಾರೆಯೇ? ಎಂದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಈ ವೇಳೆ ನಾನು ಪ್ರಧಾನಿ ಹುದ್ದೆಗೇರುವ ಆಲೋಚನೆಯಲ್ಲಿ ಇಲ್ಲ ಎಂದಿದ್ದರು.
ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ಆಗಸ್ಟ್ 24 ರಂದು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಬೇಕಾಗಿದೆ. ಸಚಿವ ಸಂಪುಟ ವಿಸ್ತರಣೆಯು ಆಗಸ್ಟ್ 15 ರ ಮೊದಲು ನಡೆಯುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಜೆಡಿಯು, ಆರ್‌ಜೆಡಿ ಹೆಚ್ಚು ಸಚಿವ ಸ್ಥಾನಗಳನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ. ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟಕ್ಕೆ ವಿಧಾನಸಭೆಯಲ್ಲಿ 164 ಸದಸ್ಯರ ಬೆಂಬಲವಿದೆ.