ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮಾಜಿ ಎಂಎಲ್‌ಸಿ ವಿನಾಯಕ್ ಮೇಟೆ ದುರ್ಮರಣ
ಮರಾಠ ಮೀಸಲಾತಿ ನಾಯಕ, ಮಾಜಿ ಎಂಎಲ್‌ಸಿ ವಿನಾಯಕ್ ಮೇಟೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
Published: 14th August 2022 05:05 PM | Last Updated: 14th August 2022 05:05 PM | A+A A-

ಅಪಘಾತದ ಫೋಟೋ
ಮುಂಬೈ: ಮರಾಠ ಮೀಸಲಾತಿ ನಾಯಕ, ಮಾಜಿ ಎಂಎಲ್‌ಸಿ ವಿನಾಯಕ್ ಮೇಟೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಮಡಪ್ ಸುರಂಗದ ಸಮೀಪ ಮೇಟೆ ಅವರ ಕಾರಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರಿಂದ ವಿನಾಯಕ್ ರನ್ನು ನವಿ ಮುಂಬೈನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ ನ ಮಾಜಿ ಸದಸ್ಯ ವಿನಾಯಕ್ ಮೇಟೆ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ರಾಮ್ ದೊಬ್ಲೆಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.