ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಗ್ರೇನೇಡ್ ದಾಳಿ; ಪೊಲೀಸ್ ಸಿಬ್ಬಂದಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಖೈಮೋಹ್ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

'ನಿನ್ನೆ ರಾತ್ರಿ  ಕುಲ್ಗಾಮ್‌ ಜಿಲ್ಲೆಯ ಖೈಮೊಹ್‌ನಲ್ಲಿ ಗ್ರೆನೇಡ್ ದಾಳಿ ನಡೆದಿರುವ ಘಟನೆ ವರದಿಯಾಗಿದೆ. ಈ ಭಯೋತ್ಪಾದಕ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿಯಾದ ತಾಹಿರ್ ಖಾನ್ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಕೂಡಲೇ ಅನಂತನಾಗ್‌ನ ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅದರೆ, ಅವರು ಅಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com