ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಖಾರ್ಗೋನ್: ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಿಲ್ಲೆಯಿಂದ 80 ಕಿಮೀ ದೂರದಲ್ಲಿರುವ ಬರ್ವಾಹಾ ಪೊಲೀಸ್ ಠಾಣೆ ವ್ಯಾಪ್ತಿಯ ನರ್ಮಲಾ ರಸ್ತೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೋಹನ್ ಪಟೇಲ್ ಎಂಬಾತ, ಕಿರಾಣಿ ಅಂಗಡಿ ಕಟ್ಟಡದ ಮೇಲ್ಬಾಗದಲ್ಲಿದ್ದ ಕಬ್ಬಿಣದ ರಾಡ್‌ಗೆ ರಾಷ್ಟ್ರಧ್ವಜವನ್ನು ಕಟ್ಟುವಾಗ ವಿದ್ಯುತ್ ತಂತಿಗೆ ತಗುಲಿದೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಆತ ಸಾವಿಗೀಡಾಗಿದ್ದಾರೆ ಎಂದು ಬರ್ವಾಹಾ ಪೊಲೀಸ್ ಠಾಣೆಯ ಪ್ರಭಾರಿ ಪ್ರಕಾಶ್ ವಾಸ್ಕಲೆ ತಿಳಿಸಿದ್ದಾರೆ.

ಅವರು ಸ್ಥಳೀಯ ನಿವಾಸಿ ಅಶೋಕ್ ಖಂಡೇಲ್ವಾಲ್ ಅವರ ಮಾಲೀಕತ್ವದ ಕಿರಾಣಿ ಅಂಗಡಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದರು.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com