ಬಿಹಾರ: ರಕ್ಷಾಬಂಧನಕ್ಕಾಗಿ ಸಹೋದರನನ್ನು ಭೇಟಿ ಮಾಡಲು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್
ರಕ್ಷಾ ಬಂಧನಕ್ಕಾಗಿ ತನ್ನ ಸಹೋದರನನ್ನು ಭೇಟಿ ಮಾಡುವುದಕ್ಕಾಗಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರದ ಸಿವಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
Published: 15th August 2022 02:11 AM | Last Updated: 15th August 2022 02:11 AM | A+A A-

ಅತ್ಯಾಚಾರ (ಸಂಗ್ರಹ ಚಿತ್ರ)
ಪಾಟ್ನ: ರಕ್ಷಾ ಬಂಧನಕ್ಕಾಗಿ ತನ್ನ ಸಹೋದರನನ್ನು ಭೇಟಿ ಮಾಡುವುದಕ್ಕಾಗಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರದ ಸಿವಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಇಂತಹ ಮೃಗೀಯ ಕೃತ್ಯದ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶ ಕೆರಳಿದ್ದು, ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ. ಘಟನೆಗೆ ಸಂಬಂಧಿಸಿದ ಈ ವರೆಗಿನ ಮಾಹಿತಿಯ ಪ್ರಕಾರ, ಬಾಲಕಿ ತನ್ನ ಸಹೋದರನಿಗೆ ರಾಖಿ ಕಟ್ಟಲು ತೆರಳುತ್ತಿದ್ದಾಗ ನಾಲ್ವರು ಆಕೆಯನ್ನು ಅಪಹರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.
ಬಾಲಕಿ ಕಿರುಚುತ್ತಿದ್ದದ್ದನ್ನು ಕೇಳಿಸಿಕೊಂಡ ದಾರಿಯಲ್ಲಿ ಹೋಗುತ್ತಿದ್ದ ಕಾರುಚಾಲಕ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ, ಆಗ ಆರೋಪಿಗಳು ಪರಾರಿಯಾಗಿದ್ದಾರೆ.
ಕಾರು ಚಾಲಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದ್ದು ತೀವ್ರವಾಗಿ ಗಾಯಗೊಂಡ ಆಕೆಯ ಸ್ಥಿತಿ ಗಂಭೀರವಾಗಿದೆ.
ಪವನ್ ಕುಮಾರ್, ಅಂಕಿತ್ ಕುಮಾರ್, ಇಮಾಮುದ್ದೀನ್, ದಿನೇಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮಸ್ಥರ ಪ್ರಕಾರ ಈ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ ವ್ಯಸನಿಗಳು ಹಾಗೂ ಮದ್ಯ ವ್ಯಸನಿಗಳ ಸಂಖ್ಯೆ ಹೆಚ್ಚಾಗಿದ್ದು, ದಾರಿಯಲ್ಲಿ ಹೋಗುವ ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ. ಆದರೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದಾರೆ. ಮದ್ಯ ನಿಷೇಧದ ಬಳಿಕ ಯುವಕರು ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.