ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 15th August 2022 01:25 PM | Last Updated: 15th August 2022 01:27 PM | A+A A-

ಮುಖೇಶ್ ಅಂಬಾನಿ
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆಗೆ 8 ಬಾರಿ ಬೆದರಿಕೆ ಕರೆ ಮಾಡಲಾಗಿತ್ತು. ಕರೆ ಮಾಡಿದವನನ್ನು ಅಫ್ಜಲ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇಂದು ಒಟ್ಟು ಎಂಟು ಬೆದರಿಕೆ ಕರೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದರು.
ಇದನ್ನೂ ಓದಿ: ಮುಕೇಶ್ ಅಂಬಾನಿ ಕುಟುಂಬ ಲಂಡನ್ ನಲ್ಲಿ ನೆಲೆಸುವುದಿಲ್ಲ: ರಿಲಾಯನ್ಸ್ ಸ್ಪಷ್ಟನೆ
'ಅಪರಿಚಿತ ವ್ಯಕ್ತಿಯಿಂದ ಮುಕೇಶ್ ಅಂಬಾನಿಗೆ ಜೀವ ಬೆದರಿಕೆಯ ಒಟ್ಟು 8 ಕರೆಗಳನ್ನು ಮಾಡಲಾಗಿದೆ. ಈ ಬಗ್ಗೆ ಪರಿಶೀಲಿಸಲು ಮುಂಬೈ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ. ತರಂಗ್ ಗಿಂಚಂದಾನಿ ಹೇಳಿದ್ದಾರೆ.
2021ರ ಮಾರ್ಚ್‌ನಲ್ಲಿ ಸ್ಫೋಟಕ ತುಂಬಿದ್ದ ಎಸ್‌ಯುವಿ ವಾಹನ ದಕ್ಷಿಣ ಮುಂಬೈಯಲ್ಲಿರುವ ಅಂಬಾನಿ ನಿವಾಸದ ಸಮೀಪ ಪತ್ತೆಯಾಗಿತ್ತು. ಅದೇ ವರ್ಷ ನವೆಂಬರ್‌ನಲ್ಲಿ ಅವರ ನಿವಾಸದ ಸುತ್ತ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದಿತ್ತು. ಬಳಿಕ ಅಂಬಾನಿ ಕುಟುಂಬದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು.