ರಾಜಸ್ಥಾನ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಮನನೊಂದು ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಪನಾ ಚಂದ್ ಮೇಘವಾಲ್
ಪನಾ ಚಂದ್ ಮೇಘವಾಲ್

ಜೈಪುರ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಮನನೊಂದು ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ತಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಮಗೆ ಶಾಸಕರಾಗಿ ಮುಂದುವರೆಯುವ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ಜಾಲೋರ್‌ನಲ್ಲಿ ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ್ದಕ್ಕಾಗಿ ಶಾಲಾ ಶಿಕ್ಷಕರಿಂದ ತೀವ್ರ ಹಲ್ಲೆಗೊಳಗಾಗಿದ್ದ ದಲಿತ ಬಾಲಕನ ಸಾವಿನ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

"ನಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ನಾವು ವಿಫಲವಾದಾಗ, ಈ ಹುದ್ದೆಯಲ್ಲಿ ಉಳಿಯಲು ನಮಗೆ ಯಾವುದೇ ಹಕ್ಕಿಲ್ಲ. ನನ್ನ ಆತ್ಮ ಸಾಕ್ಷಿಯ ಮಾತು ಕೇಳಿ ನಾನು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಯಾವುದೇ ಸ್ಥಾನವಿಲ್ಲದೆ ಸಮಾಜಕ್ಕೆ ಸೇವೆ ಸಲ್ಲಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಬರನ್-ಅತ್ರು ಕ್ಷೇತ್ರದ ಕಾಂಗ್ರೆಸ್ ಶಾಸಕ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ದೇಶವು ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದರೂ, ದಲಿತರು ಮತ್ತು ಇತರ ವಂಚಿತ ವರ್ಗಗಳ ಮೇಲಿನ ದೌರ್ಜನ್ಯಗಳು ನಡೆಯುತ್ತಲೇ ಇವೆ ಎಂದು ಮೇಘವಾಲ್ ಹೇಳಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ನೋಡಿ ನನಗೆ ನೋವಾಗಿದೆ, ನನ್ನ ಸಮುದಾಯವನ್ನು ಹಿಂಸಿಸುತ್ತಿರುವ ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com