ಕೋವಿಡ್-19: ಕಳೆದ 24 ಗಂಟೆಗಳಲ್ಲಿ 14,917 ಹೊಸ ಪ್ರಕರಣ, 32 ಜನರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,917 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 32 ಜನರು ಸಾವಿಗೀಡಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,917 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 32 ಜನರು ಸಾವಿಗೀಡಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,917 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 32 ಜನರು ಸಾವಿಗೀಡಾಗಿದ್ದಾರೆ. ಆ ಮೂಲಕ ದೇಶದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 4,42,53,464 ಏರಿಕೆಯಾಗಿದ್ದು, ಈ ಪೈಕಿ 4,36,09,566 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 14,238 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 32 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,27,069 ಕ್ಕೆ ಏರಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com