ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರಿಂದ ಗುಂಡಿನ ದಾಳಿ, ಓರ್ವ ಸಾವು
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಸುನೀಲ್ ಕುಮಾರ್ ಮೃತಪಟ್ಟಿದ್ದು, ಪಿಂಟು ಕುಮಾರ್ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶೋಪಿಯಾನ್ ಜಿಲ್ಲೆಯ ಚೊಟಿಪೊರಾ ಪ್ರದೇಶದ ಸೇಬಿನ ತೋಟವೊಂದರಲ್ಲಿ ಉಗ್ರರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಯೊಂದಕ್ಕೆ ರವಾನಿಸಲಾಗಿದೆ. ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್ ವಕ್ತಾರರೊಬ್ಬರು ಹೇಳಿದ್ದಾರೆ.
ಕಳೆದ ವಾರದಿಂದ ಕಾಶ್ಮೀರ ಕಣಿವೆಯಲ್ಲಿ ಉಗ್ರರು ದಾಳಿಯನ್ನು ತೀವ್ರಗೊಳಿಸಿದ್ದು, ಭಾನುವಾರ ನೌವಾಟದಲ್ಲಿ ಪೊಲೀಸರೊಬ್ಬರು ಸಾವನ್ನಪ್ಪಿದ್ದರು. ಕಳೆದ ವಾರ ಬಂಡಿಪೊರಾದಲ್ಲಿ ವಲಸಿಗ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಸೋಮವಾರ ಬುದ್ಗಾಮ್ ಮತ್ತು ಶ್ರೀನಗರ ಜಿಲ್ಲೆಯಲ್ಲಿ ಎರಡು ಗ್ರೇನೆಡ್ ದಾಳಿ ನಡೆಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ