
ದೃಶ್ಯ ಸಿಸಿಟಿವಿಯಲ್ಲಿ ಸರೆ
ಅಮೃತಸರ: ಪಂಜಾಬ್ ನ ಅಮೃತಸರದಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಜೀಪ್ ಗೆ ದುಷ್ಕರ್ಮಿಗಳು ಬಾಂಬ್ ಇಟ್ಟು ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಕಿಡಿಗೇಡಿಗಳು ಜೀಪ್ ಅಡಿಗೆ ಬಾಂಬ್ ಫಿಕ್ಸ್ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದೆ . ಈ ಘಟನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಂಜಾಬ್‌ನಲ್ಲಿ ಉಗ್ರಗಾಮಿಗಳ ವಿರುದ್ಧ ಕೆಲಸ ಮಾಡಿದ್ದರಿಂದ ತನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಎಸ್‌ಐ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.
'ನನ್ನ ಕಾರಿನ ಕೆಳಗೆ ಬಾಂಬ್ ಇಡಲಾಗಿತ್ತು. ನನ್ನ ಕಾರ್ ಕ್ಲೀನರ್ ಅದರ ಬಗ್ಗೆ ನನಗೆ ಮಾಹಿತಿ ನೀಡಿದರು. ನಸುಕಿನ 2 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ನನ್ನ ಕಾರಿನ ಕೆಳಗೆ ಏನನ್ನೋ ಇಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು ಎಂದು ಹೇಳಿದ್ದಾರೆ.