ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಡಿಜಿಸಿಎ
ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ.
Published: 17th August 2022 06:49 PM | Last Updated: 17th August 2022 06:49 PM | A+A A-

ಸಂಗ್ರಹ ಚಿತ್ರ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಇಂದು ತಿಳಿಸಿದೆ.
ಪ್ರಯಾಣಿಕರು ಕೋವಿಡ್ ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ.
ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ಮೇಲೆ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ.
ಪ್ರಯಾಣದ ಉದ್ದಕ್ಕೂ ಪ್ರಯಾಣಿಕರು ಫೇಸ್ ಮಾಸ್ಕ್ ಗಳನ್ನು ಸರಿಯಾಗಿ ಧರಿಸಿರುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಎಂದು ಡಿಜಿಸಿಎ ತಿಳಿಸಿದೆ.