ರಸ್ತೆ ಮಧ್ಯೆ ಕೂತು ಮದ್ಯ ಸೇವಿನೆ: ಬಾಡಿಬಿಲ್ಡರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!

ಡೆಹ್ರಾಡೂನ್‌ನ ರಸ್ತೆ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಸಾರ್ವಜನಿಕವಾಗಿ ಮದ್ಯ ಸೇವಿಸಿದ್ದಕ್ಕಾಗಿ ಬಾಡಿಬಿಲ್ಡರ್ ಮತ್ತು ಇನ್‌ಸ್ಟಾಗ್ರಾಮ್ ಸ್ಟಾರ್ ಬಾಬಿ ಕಟಾರಿಯಾ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಬಾಬಿ ಕಟಾರಿಯಾ
ಬಾಬಿ ಕಟಾರಿಯಾ

ಡೆಹ್ರಾಡೂನ್: ಡೆಹ್ರಾಡೂನ್‌ನ ರಸ್ತೆ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಸಾರ್ವಜನಿಕವಾಗಿ ಮದ್ಯ ಸೇವಿಸಿದ್ದಕ್ಕಾಗಿ ಬಾಡಿಬಿಲ್ಡರ್ ಮತ್ತು ಇನ್‌ಸ್ಟಾಗ್ರಾಮ್ ಸ್ಟಾರ್ ಬಾಬಿ ಕಟಾರಿಯಾ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ನಾವು ಬಾಬಿ ಕಟಾರಿಯಾ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಪಡೆದಿದ್ದೇವೆ ಮತ್ತು ಅವರನ್ನು ಬಂಧಿಸಲು ತಂಡವನ್ನು ಹರಿಯಾಣಕ್ಕೆ ಕಳುಹಿಸಲಾಗುತ್ತಿದೆ ಎಂದು ಕ್ಯಾಂಟ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರಾಜೇಶ್ ಸಿಂಗ್ ರಾವತ್ ಹೇಳಿದ್ದಾರೆ. ಬಾಬಿ ಕಟಾರಿಯಾ ಅವರು ರಸ್ತೆಯ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಮದ್ಯ ಸೇವಿಸಿದ ವೈರಲ್ ವೀಡಿಯೊಗೆ ಸಂಬಂಧಿಸಿದಂತೆ ಅವರಿಗೆ ನೀಡಲಾದ ಮೂರು ನೋಟಿಸ್‌ಗಳಿಗೆ ಅವರು ಪ್ರತಿಕ್ರಿಯಿಸದ ಕಾರಣ ಅವರ ವಿರುದ್ಧ  ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಬೇಕಾಯಿತು ಎಂದು ಅವರು ಹೇಳಿದರು.

ರಸ್ತೆ ಮಧ್ಯೆ ಕೂತು ಮದ್ಯ ಸೇವಿಸುತ್ತಿದ್ದ ವಿಡಿಯೋವನ್ನ ಹರಿಯಾಣದ ನಿವಾಸಿ ಬಾಬಿ ಕಟಾರಿಯಾ ಕಳೆದ ವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು.

ಕಳೆದ ವಾರ ಡೆಹ್ರಾಡೂನ್‌ನ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ಕಟಾರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 290 (ಸಾರ್ವಜನಿಕ ಉಪದ್ರವ), 510 (ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ), 336 (ಮಾನವ ಜೀವ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಅಪಾಯ), ಮತ್ತು 342 (ಒಬ್ಬ ವ್ಯಕ್ತಿಯನ್ನು ತಪ್ಪಾಗಿ ಬಂಧಿಸುವುದು) ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಪೈಸ್‌ಜೆಟ್ ವಿಮಾನದಲ್ಲಿ ಧೂಮಪಾನ ಮಾಡುತ್ತಿರುವ ಹಳೆಯ ವೀಡಿಯೊವೊಂದನ್ನು ಬಾಬಿ ಕಟಾರಿಯಾ ಅಪ್ ಲೋಡ್ ಮಾಡಿದ ನಂತರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದರು.

ಜನವರಿ 20 ರಂದು ತನ್ನ ದುಬೈ-ದೆಹಲಿ ವಿಮಾನದಲ್ಲಿ ಪ್ರಯಾಣಿಕರು ವಿಮಾನ ಹತ್ತುವಾಗ ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರು ಆನ್-ಬೋರ್ಡಿಂಗ್ ಕಾರ್ಯವಿಧಾನವನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾಗ ಧೂಮಪಾನ ಸೇವಿಸಿದ ಘಟನೆ ಸಂಭವಿಸಿದೆ ಎಂದು ಸ್ಪೈಸ್ ಜೆಟ್ ಹೇಳಿತ್ತು.

ತನಿಖೆಯ ನಂತರ, ವಿಮಾನಯಾನ ಸಂಸ್ಥೆಯು ಫೆಬ್ರವರಿಯಲ್ಲಿ 15 ದಿನಗಳವರೆಗೆ ಪ್ರಯಾಣಿಕರನ್ನು 'ನೊ ಫ್ಲೈಯಿಂಗ್ ಲಿಸ್ಟ್' ಗೆ ಸೇರಿಸಿದೆ ಎಂದು ಅದು ಉಲ್ಲೇಖಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com