ಸಿಬಿಐಗೆ ಸ್ವಾಗತ, ಆದರೆ ಪಿತೂರಿಯಿಂದ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ

ಸಿಬಿಐಗೆ ಸ್ವಾಗತ. ಆದರೆ ಪಿತೂರಿಗಳು ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಮತ್ತು ಉತ್ತಮ ಶಿಕ್ಷಣಕ್ಕಾಗಿ ಕೆಲಸ ಮಾಡುವ ನನ್ನ ಸಂಕಲ್ಪವನ್ನು ತಡೆಯಲು ಸಾಧ್ಯವಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ...
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಸಿಬಿಐಗೆ ಸ್ವಾಗತ. ಆದರೆ ಪಿತೂರಿಗಳು ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಮತ್ತು ಉತ್ತಮ ಶಿಕ್ಷಣಕ್ಕಾಗಿ ಕೆಲಸ ಮಾಡುವ ನನ್ನ ಸಂಕಲ್ಪವನ್ನು ತಡೆಯಲು ಸಾಧ್ಯವಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಹೇಳಿದ್ದಾರೆ. 

ಸಿಬಿಐ ದಾಳಿಗೆ ಸ್ವಾಗತ. ತಮ್ಮ ನಿವಾಸ ಮತ್ತು ಇತರ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ ಎಂದು ಸಿಸೋಡಿಯಾ ಟ್ವಿಟ್ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆಯು ಆಮ್ ಆದ್ಮಿ ಪಕ್ಷದ ನಾಯಕನ ಮನೆ, ಐಎಎಸ್ ಅಧಿಕಾರಿ ಅರವ ಗೋಪಿ ಕೃಷ್ಣ ಅವರ ನಿವಾಸ ಮತ್ತು ಇತರ 19 ಸ್ಥಳಗಳಲ್ಲಿ ಶೋಧ ನಡೆಸಿದೆ.

"ನಾವು ಹಾರ್ಡ್‌ಕೋರ್ ಪ್ರಾಮಾಣಿಕರಾಗಿದ್ದು, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ರೂಪಿಸುತ್ತಿದ್ದೇವೆ. ನಮ್ಮ ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ಅತ್ಯಂತ ದುರದೃಷ್ಟಕರ. ಆದ್ದರಿಂದಲೇ ನಮ್ಮ ದೇಶ ನಂಬರ್ ಒನ್ ಆಗಲು ಸಾಧ್ಯವಾಗಲಿಲ್ಲ" ಎಂದು ಸಿಸೋಡಿಯಾ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿಸೋಡಿಯಾ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸತ್ಯ ಹೊರಬರುತ್ತದೆ. ಇಲ್ಲಿಯವರೆಗೂ ನನ್ನ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಯಾವುದೂ ಹೊರಬರಲಿಲ್ಲ. ಇದರಲ್ಲಿಯೂ ಏನೂ ಹೊರಬರುವುದಿಲ್ಲ, ಈ ದೇಶದಲ್ಲಿ ಉತ್ತಮ ಶಿಕ್ಷಣಕ್ಕಾಗಿ ನನ್ನ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ದೆಹಲಿ ಡಿಸಿಎಂ ಹೇಳಿದ್ದಾರೆ.

ತಮ್ಮ ಮತ್ತುಈಗಾಗಲೇ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್ ಅವರನ್ನು ಉಲ್ಲೇಖಿಸಿ, "ನಮ್ಮ ವಿರುದ್ಧ ಸುಳ್ಳು ಆರೋಪಗಳಿವೆ ಮತ್ತು ನ್ಯಾಯಾಲಯದಲ್ಲಿ ಸತ್ಯ ಹೊರಬರುತ್ತದೆ" ಎಂದು ಅವರು ಸಿಸೋಡಿಯಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com