ತಿರುಪತಿಗೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಭೇಟಿ: ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.
Published: 19th August 2022 12:48 PM | Last Updated: 19th August 2022 02:35 PM | A+A A-

ತಿರುಪತಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಇತರರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು. ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಇಂದು ಕೃಷ್ಣ ಜನ್ಮಾಷ್ಠಮಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಶಾಸಕ ಎಸ್ ಆರ್ ವಿಶ್ವನಾಥ್ ಸೇರಿ ಹಲವರು ತಿರುಪತಿ ವೆಂಕಟರಮಣ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಕಂದಾಯ ಸಚಿವ ಆರ್ ಅಶೋಕ್ , ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ನಿನ್ನೆ ತಿರುಮಲದಲ್ಲಿ ತಿರುಪತಿ ತಿರುಮಲ ದೇವಸ್ಥಾನ ಅಧ್ಯಕ್ಷ ಸುಬ್ಬ ರೆಡ್ಡಿ ಅವರು ಸನ್ಮಾನಿಸಿ ಗೌರವಿಸಿದರು.
ಇದಕ್ಕೂ ಮುನ್ನ ಬೆಂಗಳೂರಿನ ಸಿಎಂ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದ ಚಿತ್ರನಟ ವಿ ರವಿಚಂದ್ರನ್, ಬೆಂಗಳೂರಿನಲ್ಲಿ ತಮ್ಮ ಪುತ್ರ ಮನೋರಂಜನ್ ವಿವಾಹ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.