ಮಹಾತ್ಮ ಗಾಂಧಿ ಫೋಟೋಗೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ 4 ಮಂದಿ ಬಂಧನ

ಮಹಾತ್ಮ ಗಾಂಧಿ ಫೋಟೋಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ
ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ

ವಯನಾಡು: ಮಹಾತ್ಮ ಗಾಂಧಿ ಫೋಟೋಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಸುಮಾರು ಎರಡು ತಿಂಗಳ ಹಿಂದೆ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ನಡೆಸಿದ ಹಿಂಸಾತ್ಮಕ ಪ್ರತಿಭಟನೆಯ ನಂತರ ಮಹಾತ್ಮ ಗಾಂಧಿಯವರ ಫೋಟೋಗೆ ಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಇದೀಗ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರ ಪೈಕಿ ಇಬ್ಬರು ಆರೋಪಿಗಳು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಸಿಬ್ಬಂದಿಗಳು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರ ಬಂಧನವನ್ನು ಪೊಲೀಸರು ದೃಢಪಡಿಸಿದ್ದು, ಬಂಧಿತರಲ್ಲಿ ಇಬ್ಬರು ಇಲ್ಲಿನ ವಯನಾಡ್ ಸಂಸದರ ಕಚೇರಿಯ ಸಿಬ್ಬಂದಿ ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರು ಎಂದು ಕಾಂಗ್ರೆಸ್ ಮೂಲಗಳು ಪಿಟಿಐಗೆ ತಿಳಿಸಿವೆ.

ಜೂನ್ 24 ರಂದು ಎಸ್‌ಎಫ್‌ಐ ಕಾರ್ಯಕರ್ತರು ವಯನಾಡ್ ಸಂಸದರ ಕಚೇರಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಕಚೇರಿಯ ಗೋಡೆಯ ಮೇಲೆ ನೇತಾಡುತ್ತಿದ್ದ ಮಹಾತ್ಮ ಗಾಂಧಿಯವರ ಫೋಟೋವನ್ನು ಹಾನಿಗೊಳಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com