
ಕುಸಿದ ಕಟ್ಟಡ
ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಗೀತಾಂಜಲಿ ಕಟ್ಟಡ ಕುಸಿದು ಬಿದ್ದಿದೆ. ತುಂಬಾ ಹಳೆಯ ಕಟ್ಟಡ ಇದಾಗಿದ್ದು, ತುಂಬಾ ದಿನಗಳಿಂದ ಖಾಲಿ ಇತ್ತು ಎನ್ನಲಾಗಿದೆ. ಕಟ್ಟಡ ಕುಸಿತದ ವೇಳೆ ಕಟ್ಟಡ ಸಮೀಪ ಯಾರೂ ಇರಲಿಲ್ಲ. ಹೀಗಾಗಿ ಸಂಭಾವ್ಯ ಸಾವು-ನೋವು ತಪ್ಪಿದೆ ಎನ್ನಲಾಗಿದೆ.
ಇದನ್ನೂ ಓದಿ: ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು
ವಿಚಾರ ತಿಳಿಯುತ್ತಲೇ ಅಗ್ನಿಶಾಮಕ ದಳ ದೌಡಾಯಿಸಿದ್ದು, ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಶಿಥಿಲಗೊಂಡಿರುವ ಈ ಕಟ್ಟಡ ಬೀಳುವ ಹಂತದಲ್ಲಿದ್ದು ಜನರನ್ನು ಅಲ್ಲಿಂದ ಖಾಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಗೀತಾಂಜಲಿ ಕಟ್ಟಡ ಕುಸಿದು ಬಿದ್ದಿದೆ. #Mumbai #buildingcollapse #BMC #ಮುಂಬೈ #ಕಟ್ಟಡಕುಸಿತ #ಬಿಎಂಸಿ
— kannadaprabha (@KannadaPrabha) August 19, 2022
Read more here: https://t.co/kHnBzhywFl pic.twitter.com/pWJBuIZndO
ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿದ್ದಾರೆಯೇ ಎಂದು ಅಗ್ನಿಶಾಮಕ ದಳ ಪರಿಶೀಲನೆ ಮಾಡುತ್ತಿದೆ. ಎಂಟು ಅಗ್ನಿಶಾಮಕದಳದ ವಾಹನ, ಎರಡು ರಕ್ಷಣಾ ದಳದ ವ್ಯಾನ್, ಮೂರು ಆಂಬುಲೆನ್ಸ್ ಘಟನಾ ಸ್ಥಳದಲ್ಲಿವೆ ಎನ್ನಲಾಗಿದೆ.
ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಕುಸಿತ: ಪುಣೆಯಲ್ಲಿ ಐವರು ಸಾವು, ಹಲವರಿಗೆ ಗಾಯ
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ನ ಆರ್-ಸೆಂಟ್ರಲ್ ವಾರ್ಡ್ ನೀಡಿದ ಮಾಹಿತಿಯ ಪ್ರಕಾರ, ಕಟ್ಟಡವು ಶಿಥಿಲವಾಗಿದೆ ಎಂದು ಈ ಹಿಂದೆಯೇ ಘೋಷಿಸಲಾಗಿತ್ತು ಮತ್ತು ಅದನ್ನು ಖಾಲಿ ಮಾಡಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.