ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಕತ್ತು ಹಿಸುಕಲು ಸಿಬಿಐ ಬಳಸಿಕೊಳ್ಳುತ್ತಿದೆ: ಕನ್ಹಯ್ಯಾ ಕುಮಾರ್

ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಕತ್ತು ಹಿಸುಕಲು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರು ಶನಿವಾರ ಆರೋಪಿಸಿದ್ದಾರೆ.
ಕನ್ಹಯ್ಯಾ ಕುಮಾರ್
ಕನ್ಹಯ್ಯಾ ಕುಮಾರ್

ನಾಗ್ಪುರ: ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಕತ್ತು ಹಿಸುಕಲು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರು ಶನಿವಾರ ಆರೋಪಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕನ್ಹಯ್ಯಾ ಕುಮಾರ್ ನಾಗ್ಪುರಕ್ಕೆ ಬಂದಿದ್ದರು.

ಸಿಬಿಐನಂತಹ ತನಿಖಾ ಸಂಸ್ಥೆಗಳು ದೇಶವನ್ನು ರಕ್ಷಿಸುವ ಉದ್ದೇಶವನ್ನು ಹೊಂದಿವೆ. ಆದರೆ ಪ್ರಸ್ತುತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ರಕ್ಷಿಸಿಕೊಳ್ಳಲು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಪಕ್ಷಗಳ ಕತ್ತು ಹಿಸುಕಲು ಸಿಬಿಐ ಅನ್ನು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಮತ್ತು ಇತರ 30 ಸ್ಥಳಗಳ ಮೇಲೆ ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com