ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನಿವಾಸದ ಮೇಲೆ ದಾಳಿ ಬೆನ್ನಲ್ಲೇ ಆರೋಪಿಗಳಿಗೆ ಸಿಬಿಐ ಸಮನ್ಸ್
ದೆಹಲಿ ಅಬಕಾರಿ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ...
Published: 20th August 2022 06:57 PM | Last Updated: 20th August 2022 07:38 PM | A+A A-

ಸಿಬಿಐ ದಾಳಿ
ನವದೆಹಲಿ: ದೆಹಲಿ ಅಬಕಾರಿ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ ಶನಿವಾರ ಕೆಲವು ಆರೋಪಿಗಳನ್ನು ಸಮನ್ಸ್ ಜಾರಿಗೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 31 ಸ್ಥಳಗಳಲ್ಲಿ ದಾಳಿ ನಡೆಸಿದಾಗ ವಶಪಡಿಸಿಕೊಂಡ ದಾಖಲೆಗಳನ್ನು ಸಂಸ್ಥೆ ಪರಿಶೀಲಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ಮತ್ತು ಬ್ಯಾಂಕ್ ವಹಿವಾಟುಗಳ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಇತರ ಆರೋಪಿಗಳಿಗೂ ಸಮನ್ಸ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ: ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ: ಮನೀಶ್ ಸಿಸೋಡಿಯಾಗೆ ಬಿಜೆಪಿ ತಿರುಗೇಟು
ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ದಾಖಲಾಗಿರುವ ಸಿಬಿಐ ಎಫ್‌ಐಆರ್ ಅನ್ನು ಹಣಕಾಸು ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯದೊಂದಿಗೆ ಹಂಚಿಕೊಳ್ಳಲಾಗಿದ್ದು, ಇದು ಅಕ್ರಮ ಹಣ ವರ್ಗಾವಣೆಯ ಆರೋಪಗಳನ್ನು ಪರಿಶೀಲಿಸಲಿದೆ.
ನವೆಂಬರ್‌ನಲ್ಲಿ ಬಿಡುಗಡೆಯಾದ ದೆಹಲಿ ಅಬಕಾರಿ ನೀತಿಯ ಬಗ್ಗೆ ತನಿಖಾ ಸಂಸ್ಥೆಯು ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದೆ. ದೆಹಲಿ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯದ ಅಂಗಡಿ ಪರವಾನಗಿಗಳನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿದೆ.