ಬಿಲ್ಕಿಸ್ ಪ್ರಕರಣದ 11 ಅಪರಾಧಿಗಳ ಬಿಡುಗಡೆ ನಿರ್ಧಾರ ರದ್ದುಗೊಳಿಸುವಂತೆ 3 ಮುಸ್ಲಿಂ ಶಾಸಕರ ಆಗ್ರಹ, ರಾಷ್ಟ್ರಪತಿಗೆ ಪತ್ರ!

2002ರ ಬಿಲ್ಕಿಸ್ ಬಾನೋ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡುವುದು 'ನಾಚಿಕೆಗೇಡಿನ ನಿರ್ಧಾರ' ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಗುಜರಾತ್ ಕಾಂಗ್ರೆಸ್ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಹಮದಾಬಾದ್: 2002ರ ಬಿಲ್ಕಿಸ್ ಬಾನೋ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಡುಗಡೆ ಮಾಡುವುದು 'ನಾಚಿಕೆಗೇಡಿನ ನಿರ್ಧಾರ' ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಗುಜರಾತ್ ಕಾಂಗ್ರೆಸ್ ಮೂವರು ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಮೂವರು ಶಾಸಕರಾದ ಗ್ಯಾಸುದ್ದೀನ್ ಶೇಖ್, ಇಮ್ರಾನ್ ಖೇದವಾಲಾ ಮತ್ತು ಜಾವೇದ್ ಪಿರ್ಜಾದಾ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವುದಾಗಿ ಶೇಖ್ ತಿಳಿಸಿದ್ದಾರೆ.

ತಮ್ಮ ಜಂಟಿ ಪತ್ರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ ಗುಜರಾತ್ ಸರ್ಕಾರದ ನಿರ್ಧಾರವು 'ನಾಚಿಕೆಗೇಡಿನ', 'ವಿವೇಚನೆರಹಿತ' ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕ ಎಂದು ಶಾಸಕರು ಬಣ್ಣಿಸಿದ್ದಾರೆ.

ಕ್ಷಮಾದಾನ ನೀತಿಯಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರದ ಅಪರಾಧಿಗಳನ್ನು ಬಿಡುಗಡೆ ಮಾಡಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊಂದಿದ್ದರೂ, ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ಗುಜರಾತ್‌ನ ಬಿಜೆಪಿ ಸರ್ಕಾರ ತನ್ನ ಅಸೂಕ್ಷ್ಮತೆಯನ್ನು ಪ್ರದರ್ಶಿಸಿದೆ. ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶಾದಾಯಕ ನಿರ್ಧಾರ ಎಂದು ಪತ್ರದಲ್ಲಿ ಹೇಳಲಾಗಿದ್ದು, ಅದರ ಪ್ರತಿಯನ್ನು ಶೇಖ್ ಅವರ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

2002ರ ಗುಜರಾತ್ ಕೋಮುಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಮೂರು ವರ್ಷದ ಮಗಳ ಹತ್ಯೆಯ ಅಪರಾಧಕ್ಕಾಗಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com