ಮಧ್ಯಪ್ರದೇಶ: ದಾಖಲೆ ಕೇಳಿದ್ದಕ್ಕೆ ಮಹಿಳಾ ಟೋಲ್ ಪ್ಲಾಜಾ ಸಿಬ್ಬಂದಿಗೆ ವಾಹನ ಚಾಲಕನಿಂದ ಕಪಾಳಮೋಕ್ಷ, ವಿಡಿಯೋ ವೈರಲ್

ಮಧ್ಯಪ್ರದೇಶದ ರಾಜ್‌ಗಢದಲ್ಲಿ ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದರು.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢದಲ್ಲಿ ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದು ಈ ಆರೋಪದ ಹಿನ್ನಲೆಯಲ್ಲಿ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಿಯೋರಾ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್‌ಗಢ-ಭೋಪಾಲ್ ರಸ್ತೆಯಲ್ಲಿರುವ ಟೋಲ್ ಪ್ಲಾಜಾದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com