ಹೀಗೆ ಆದರೆ ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅರವಿಂದ್ ಕೇಜ್ರಿವಾಲ್

ಹಣದುಬ್ಬರ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೆ ಆದರೆ, ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಹಣದುಬ್ಬರ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೆ ಆದರೆ, ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಈ ಜನರು ಸಿಬಿಐ, ಇ.ಡಿ ಜೊತೆಗೆ ಆಟವಾಡುತ್ತಿರುವಾಗ ಮತ್ತು ಸರ್ಕಾರಗಳನ್ನು ಉರುಳಿಸುವಲ್ಲಿ ನಿರತರಾಗಿರುವಾಗ ಜನರು ತಮ್ಮ ಸಮಸ್ಯೆಗಳ ಬಗ್ಗೆ ಯಾರೊಂದಿಗೆ ಮಾತನಾಡುತ್ತಾರೆ ಎಂದಿದ್ದಾರೆ.

'ರೂಪಾಯಿ ಮೌಲ್ಯ ಕುಸಿಯುತ್ತಿದೆ, ಹಣದುಬ್ಬರದಿಂದ ಜನರು ತೊಂದರೆಗೀಡಾಗಿದ್ದಾರೆ, ನಿರುದ್ಯೋಗ ಹೆಚ್ಚಾಗಿದೆ. ಆದರೆ, ಈ ಜನರು (ಬಿಜೆಪಿ ಸರ್ಕಾರ) 'ಸಿಬಿಐ-ಇ.ಡಿ' ಗಳನ್ನು ಮುಂದಿಟ್ಟುಕೊಂಡು ಆಡುತ್ತಿದ್ದಾರೆ ಮತ್ತು ಇಡೀ ದಿನ ಇದೇ ವ್ಯಾಪಾರದಲ್ಲಿ ಮುಳುಗಿರುತ್ತಾರೆ. ಹೀಗಿರುವಾಗ ಜನರು ತಮ್ಮ ಸಮಸ್ಯೆಗಳ ಬಗ್ಗೆ ಯಾರೊಂದಿಗೆ ಮಾತನಾಡುತ್ತಾರೆ ಮತ್ತು ಅವರು ಯಾರ ಬಳಿಗೆ ಹೋಗಬೇಕು? ಈ ರೀತಿಯಲ್ಲಿ ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ? ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡುವಣ ಹೋರಾಟವಾಗಿರಲಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಹೇಳಿದ್ದರು.

ತಮ್ಮ ನಿವಾಸದ ಮೇಲೆ ಸಿಬಿಐ ದಾಳಿ ನಡೆದ ಮಾರನೆ ದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಹೆದರಿಸಲು ಎಲ್ಲಾ ವಿಧಾನಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com