ದೇಶದಲ್ಲಿ 210 ಕೋಟಿ ಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಲಾಗಿದೆ. ಸೋಮವಾರ 210 ಕೋಟಿಗೂ ಅಧಿಕ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಲಾಗಿದೆ. ಸೋಮವಾರ 210 ಕೋಟಿಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ 35 ಲಕ್ಷಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಮನ್ಸುಖ್ ಮಾಂಡವೀಯಾ, ವಿಶ್ವದ ಅತ್ಯಂತ ದೊಡ್ಡದಾದ ಲಸಿಕಾ ಅಭಿಯಾನದಲ್ಲಿ ಕೊನೆ ಇಲ್ಲದಾಗಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹೆಚ್ಚಿನ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಅವರು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ 210 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದ ನಂತರವೂ ಕೋವಿಡ್ ಶಿಷ್ಟಾಚಾರ, ನಿಯಮಗಳನ್ನು ಪಾಲಿಸುವಂತೆ ಸಚಿವರು ಸಲಹೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com