ಪತ್ರಾ ಚಾಲ್ ಹಗರಣ: ಶಿವಸೇನೆ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಸೆ.5 ರವರೆಗೂ ವಿಸ್ತರಣೆ

ಪತ್ರಾ ಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5ರವರೆಗೂ ವಿಸ್ತರಣೆ ಮಾಡಿದೆ.
ಸಂಜಯ್ ರಾವುತ್
ಸಂಜಯ್ ರಾವುತ್

ಮುಂಬೈ: ಪತ್ರಾ ಚಾಲ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಸೆಪ್ಟೆಂಬರ್ 5ರವರೆಗೂ ವಿಸ್ತರಣೆ ಮಾಡಿದೆ.

ಮುಂಬೈನ ವಿಶೇಷ ನ್ಯಾಯಾಲಯವು ಸೋಮವಾರ ಮುಂಬೈನ 'ಚಾಲ್' ಮರುಅಭಿವೃದ್ಧಿ ಯೋಜನೆಯ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ. ಗೋರೆಗಾಂವ್‌ನ ಉಪನಗರದಲ್ಲಿರುವ ಪತ್ರಾ ಚಾಲ್ (ಸಾಲು ವಠಾರ) ಮರುಅಭಿವೃದ್ಧಿಯಲ್ಲಿನ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ 60 ವರ್ಷದ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ಆರಂಭದಲ್ಲಿ ಇಡಿ ಕಸ್ಟಡಿಯಲ್ಲಿದ್ದ ನಂತರ, ಶಿವಸೇನಾ ನಾಯಕನನ್ನು ಆಗಸ್ಟ್ 8 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಸೋಮವಾರ, ವಿಶೇಷ ನ್ಯಾಯಾಧೀಶ ಎಂ ಜಿ ದೇಶಪಾಂಡೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿದರು. ಇದೇ ವೇಳೆ ಪ್ರಕರಣದ ತನಿಖೆ ಇನ್ನೂ ಮುಂದುವರೆದಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

EDಯ ತನಿಖೆಯು ಪತ್ರಾ 'ಚಾಲ್'ನ ಮರುಅಭಿವೃದ್ಧಿಯಲ್ಲಿ ಹಣಕಾಸಿನ ಅಕ್ರಮಗಳು ಮತ್ತು ರಾವುತ್ ಅವರ ಪತ್ನಿ ಮತ್ತು ಸಹಚರರನ್ನು ಒಳಗೊಂಡಿರುವ ಸಂಬಂಧಿತ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದೆ. ಶಿವಸೇನಾ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಹಾಯಕ ರಾವತ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ತಮ್ಮ ವಿರುದ್ಧದ ಇಡಿ ಪ್ರಕರಣಗಳು 'ಸುಳ್ಳು' ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com