ಪ್ರವಾದಿ ವಿರುದ್ಧ ಹೇಳಿಕೆ: ನೂಪುರ್ ಶರ್ಮಾಗೆ ರಾಜ್ ಠಾಕ್ರೆ ಬೆಂಬಲ; ಜಾಕಿರ್ ನಾಯ್ಕ್ ಬಗ್ಗೆ ಹೇಳಿದ್ದೇನು?

ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲಿಸಿದ್ದಾರೆ.
ರಾಜ್ ಠಾಕ್ರೆ
ರಾಜ್ ಠಾಕ್ರೆ

ನವದೆಹಲಿ: ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ(ಬಿಜೆಪಿ) ವಕ್ತಾರೆ ನೂಪುರ್ ಶರ್ಮಾ ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬೆಂಬಲಿಸಿದ್ದಾರೆ.

ಎಂಎನ್‌ಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿವಾದಿತ ಇಸ್ಲಾಮಿಕ್ ಬೋಧಕ ಜಾಕಿರ್ ನಾಯ್ಕ್ ಅವರು ಈ ಹಿಂದೆ ಇದೇ ಮಾತುಗಳನ್ನು ಹೇಳಿದ್ದರು. ಆದರೆ ಕ್ಷಮೆಯಾಚಿಸುವಂತೆ ಯಾರೂ ಆತನನ್ನು ಒತ್ತಾಯಿಸಲಿಲ್ಲ ಎಂದು ರಾಜ್ ಠಾಕ್ರೆ ಹೇಳಿದರು.

ಹಿಂದೂ ದೇವತೆಗಳ ಹೆಸರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಠಾಕ್ರೆ, 'ಓವೈಸಿ ಸಹೋದರರು'(ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂಐಎಂ) ನಾಯಕರಾದ ಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ) ವಿರುದ್ಧ ವಾಗ್ದಾಳಿ ನಡೆಸಿದರು.

ಓವೈಸಿ ಸಹೋದರರನ್ನು 'ಆಕ್ಷೇಪಾರ್ಹ' ಎಂಬ ಪದದೊಂದಿಗೆ ಉಲ್ಲೇಖಿಸಿದ ರಾಜ್ ಠಾಕ್ರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಸೋದರ ಸಂಬಂಧಿ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧವೂ ವ್ಯಂಗ್ಯವಾಡಿದರು.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಸ್ಥಾನವನ್ನು ಹಂಚುವುದಾಗಿ ಬಿಜೆಪಿ ಭರವಸೆ ನೀಡಿತ್ತು ಎಂದು ಉದ್ಧವ್ ಹೇಳಿಕೊಂಡಿದ್ದರು. ಇದಕ್ಕೆ ರಾಜ್ ಠಾಕ್ರೆ, 'ನಾನು ಶಿವಸೇನೆಯಲ್ಲಿದ್ದಾಗ, ಬಾಳಾಸಾಹೇಬ್ (ಠಾಕ್ರೆ) ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್ಚಿನ ಶಾಸಕರು ಬೇಕು ಎಂದು ನಿರ್ಧರಿಸಿದ್ದರು.

'ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇವೇಂದ್ರ ಫಡ್ನವಿಸ್ (ಪ್ರಸ್ತುತ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ) ಮುಖ್ಯಮಂತ್ರಿಯಾಗುತ್ತಾರೆ ಎಂದು ಸಾರ್ವಜನಿಕವಾಗಿ ಹೇಳಿದ್ದರು. ಆಗ ನೀವು ಯಾಕೆ ಆಕ್ಷೇಪಿಸಲಿಲ್ಲ, ಬದಲಿಗೆ ಚುನಾವಣಾ ಫಲಿತಾಂಶಗಳಿಗಾಗಿ ಕಾಯುತ್ತಿದ್ದೀರಿ. ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡಿರುವ ಸಾರ್ವಜನಿಕ ಅಭಿಪ್ರಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com