ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಗಾರು ಬಿರುಸು: ರಾಜಸ್ಥಾನದಲ್ಲಿ ಕೊಚ್ಚಿ ಹೋದ ಇಬ್ಬರು; ಮಧ್ಯಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸ್ಥಳೀಯರು!

ರಾಜಸ್ಥಾನದ ಬರಾನ್ ಮತ್ತು ಬುಂದಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುತ್ತಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದರೆ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ.

ಕೋಟಾ/ಭೋಪಾಲ್: ರಾಜಸ್ಥಾನದ ಬರಾನ್ ಮತ್ತು ಬುಂದಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುತ್ತಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದರೆ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ರಮೇಶ್ ಮೀನಾ ಮಂಗಳವಾರ ಕರೌಲಿ ಜಿಲ್ಲೆಯ ಮಳೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿದರು. ಪ್ರವಾಹ ಪರಿಸ್ಥಿತಿಯ ಬಗ್ಗೆ ಸಿಎಂ ಪ್ರಧಾನ ಕಾರ್ಯದರ್ಶಿ ಜೊತೆ ಮಾತನಾಡಿ, ಹಲವು ಗ್ರಾಮಗಳು ದ್ವೀಪಗಳಾಗಿ ಮಾರ್ಪಟ್ಟಿವೆ. ಗ್ರಾಮಸ್ಥರಿಗೆ ಸಹಾಯ ಬೇಕು ಎಂದು ಮೀನಾ ಟ್ವೀಟ್ ಮಾಡಿದ್ದಾರೆ. ಸಂತ್ರಸ್ತರಿಗೆ ಆಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಧಾರಾಕಾರ ಮಳೆಯಿಂದಾಗಿ ರಾಜಸ್ಥಾನದ ಮೂರು ಜಿಲ್ಲೆಗಳಾದ ಜಲಾವರ್, ಧೋಲ್‌ಪುರ್ ಮತ್ತು ಬರಾನ್‌ಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿ ಸೇನೆ ಮತ್ತು ವಿಪತ್ತು ಪರಿಹಾರ ತಂಡವು ರಾಜ್ಯದಾದ್ಯಂತ  ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಂಜೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬರನ್ ಜಿಲ್ಲೆಯ ದಬ್ರಿ ಕಾಕಾಜಿ ಗ್ರಾಮದ ನಿವಾಸಿ 35 ವರ್ಷದ ಪ್ರೇಮನಾರಾಯಣ ಸುಮನ್ ಅವರ ಮೃತದೇಹವನ್ನು ಮಂಗಳವಾರ ಅವರ ಗ್ರಾಮದ ಬಳಿಯಿಂದ ಹೊರತೆಗೆಯಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ತರುಣ್ ತಿಳಿಸಿದ್ದಾರೆ.

ಬುಂಡಿ ಜಿಲ್ಲೆಯ ಸುವಾಸ್ದಾ ಗ್ರಾಮದ ನಿವಾಸಿ ಸತ್ಯನಾರಾಯಣ ಪ್ರಜಾಪತ್(50) ಅವರು ಮಂಗಳವಾರ ಬೆಳಿಗ್ಗೆ ತಮ್ಮ ಗ್ರಾಮದ ಬಳಿ ಜಾನುವಾರುಗಳಿಗೆ ಮೇವು ಸಂಗ್ರಹಿಸಲು ಹೋಗುತ್ತಿದ್ದಾಗ ಪ್ರವಾಹದಲ್ಲಿ ಕೊಚ್ಚಿದ್ದು ಪ್ರಜಾಪತ್ ಶವವಾಗಿ ಪತ್ತೆಯಾಗಿದೆ ಎಂದು (ನೈನ್ವಾನ್) ಸರ್ಕಲ್ ಇನ್ಸ್‌ಪೆಕ್ಟರ್ ಬಾಬುಲಾಲ್ ಮೀನಾ ತಿಳಿಸಿದ್ದಾರೆ.

ಇನ್ನು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗಿದೆ.

ಮಧ್ಯಪ್ರದೇಶದಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಅಲ್ಲದೆ, ಮುಂದಿನ ಗಂಟೆಗಳಲ್ಲಿ ರತ್ಲಂ, ಉಜ್ಜಯಿನಿ, ಇಂದೋರ್, ಧಾರ್, ಝಬುವಾ ಮತ್ತು ಅಲಿರಾಜಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳನ್ನು ನಿಯೋಜಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ, ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್‌ಡಿಇಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಒಟ್ಟಾಗಿ ರಾಜ್ಯದಲ್ಲಿ ಪ್ರವಾಹ/ಅತಿವೃಷ್ಟಿಯಿಂದ 400 ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com