ಕಾಂಗ್ರೆಸ್ ನೂತನ ಅಧ್ಯಕ್ಷರು ಯಾರು ಎಂಬುದು ಯಾರಿಗೂ ಗೊತ್ತಿಲ್ಲ: ಊಹಾಪೋಹ ತಳ್ಳಿಹಾಕಿದ ಗೆಹ್ಲೋಟ್

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು,...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಊಹಾಪೋಹಗಳನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅವರು ಏನು ನಿರ್ಧರಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ ಎಂದಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಮುಂದಿನ ಪಕ್ಷದ ಅಧ್ಯಕ್ಷರಾಗುವ ಸಾಧ್ಯತೆಯ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ ಎಂದು ವರದಿಯಾಗಿತ್ತು.

"ಸೋನಿಯಾ ಗಾಂಧಿ ಅವರು ತಪಾಸಣೆಗಾಗಿ ವಿದೇಶಕ್ಕೆ ಹೋಗಿದ್ದಾರೆ. ಅವರು ವಿದೇಶಕ್ಕೆ ತೆರಳುವ ಮುನ್ನ ಕೆ ಸಿ ವೇಣುಗೋಪಾಲ್ ಮತ್ತು ನಾನು ನಿನ್ನೆ ಗುಜರಾತ್‌ಗೆ ಹೋಗುತ್ತಿದ್ದಾಗ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇವೆ" ಎಂದು ಅವರು ರಾಜಸ್ಥಾನ ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾವು ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೆಹ್ಲೋಟ್, "ಇದು ಬಹಳ ಸಮಯದಿಂದ ಮಾಧ್ಯಮಗಳಲ್ಲಿ ಬರುತ್ತಿದೆ. ನೀವು ಅದರ ಬಗ್ಗೆ ಮಾತನಾಡುತ್ತಿದ್ದೀರಿ. ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಯಾರಿಗೂ ಗೊತ್ತಿಲ್ಲ" ಎಂದರು.

ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು, ಆದಷ್ಟು ಬೇಗ ಚುನಾವಣಾ ದಿನಾಂಕ ಹೊರಬೀಳಲಿದೆ. ಈ ನಡುವೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಆರೋಗ್ಯ ತಪಾಸಣೆ ಸಂಬಂಧ ವಿದೇಶಕ್ಕೆ ತೆರಳಿದ್ದು, ಅಲ್ಲಿಂದ ವಾಪಸ್ ಆದ ಬಳಿಕ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com