ಡಿಆರ್‌ಡಿಒ ಮುಖ್ಯಸ್ಥರಾಗಿ ಖ್ಯಾತ ವಿಜ್ಞಾನಿ ಸಮೀರ್ ವಿ ಕಾಮತ್ ನೇಮಕ!

ಖ್ಯಾತ ವಿಜ್ಞಾನಿ ಸಮೀರ್ ವಿ ಕಾಮತ್ ಅವರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಸಮೀರ್ ವಿ ಕಾಮತ್
ಸಮೀರ್ ವಿ ಕಾಮತ್

ನವದೆಹಲಿ: ಖ್ಯಾತ ವಿಜ್ಞಾನಿ ಸಮೀರ್ ವಿ ಕಾಮತ್ ಅವರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಡಿಆರ್‌ಡಿಒ ಮುಖ್ಯಸ್ಥರಾಗಿದ್ದ ಜಿ ಸತೀಶ್ ರೆಡ್ಡಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಡಿಆರ್‌ಡಿಒದಲ್ಲಿ ನೌಕಾ ವ್ಯವಸ್ಥೆಗಳು ಮತ್ತು ಸಾಮಗ್ರಿಗಳ ಮಹಾನಿರ್ದೇಶಕರಾಗಿದ್ದ ಕಾಮತ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿ ರಕ್ಷಣಾ ಸಚಿವಾಲಯವು ಆದೇಶ ಹೊರಡಿಸಿದೆ.

ಸಂಪುಟದ ನೇಮಕಾತಿ ಸಮಿತಿಯು(ಎಸಿಸಿ) ಸಮೀರ್ ವಿ ಕಾಮತ್ ಅವರ ನೇಮಕಕ್ಕೆ ಅನುಮೋದಿಸಿದೆ. ಅಲ್ಲದೆ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಅವರು 60 ವರ್ಷ ಪೂರೈಸುವವರೆಗೂ ಈ ಹುದ್ದೆಯಲ್ಲಿರಲಿದ್ದಾರೆ.

ಸತೀಶ್ ರೆಡ್ಡಿ ಅವರನ್ನು 2018ರ ಆಗಸ್ಟ್‌ನಲ್ಲಿ ಎರಡು ವರ್ಷಗಳ ಕಾಲ ಡಿಆರ್‌ಡಿಒ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ನಂತರ 2020ರ ಆಗಸ್ಟ್ ನಲ್ಲಿ ಅವರ ಸೇವಾವಧಿಯನ್ನು ಮತ್ತೆರಡು ವರ್ಷಕ್ಕೆ ವಿಸ್ತರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com