ಸೋನಾಲಿ ಫೋಗಟ್ ಸಾವು: ಕೊಲೆ ಪ್ರಕರಣ ದಾಖಲಿಸಿದ ಗೋವಾ ಪೊಲೀಸರು

ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಮತ್ತು ಸೋನಾಲಿ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಸೋನಾಲಿ ಪೋಗಟ್
ಸೋನಾಲಿ ಪೋಗಟ್

ನವದೆಹಲಿ: ಗೋವಾದಲ್ಲಿ ಶವವಾಗಿ ಪತ್ತೆಯಾದ ಬಿಜೆಪಿ ನಾಯಕಿ ಮತ್ತು ಸೋನಾಲಿ ಫೋಗಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಸೋನಾಲಿಯೊಂದಿಗೆ ಗೋವಾಗೆ ತೆರಳಿದ್ಧ ಆಕೆಯ ಇಬ್ಬರು ಸಹಚರರು ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆಕೆಯ ಸಹೋದರ ರಿಂಕು ಧಾಕಾ ಆರೋಪಿಸಿದ್ದರು.

ಹೀಗಾಗಿ ಆ ಇಬ್ಬರು ವ್ಯಕ್ತಿಗಳ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ಅಥವಾ ಕೊಲೆ ಪ್ರಕರಣ ದಾಖಲಿಸಿದ ನಂತರವೇ ಕುಟುಂಬದವರು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಾಗಿ ಪಟ್ಟುಹಿಡಿದಿದ್ದರು.

ತನ್ನ ಸಾವಿಗೆ ಸ್ವಲ್ಪ ಸಮಯದ ಮೊದಲು, ಸೋನಾಲಿ ಫೋಗಟ್ ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು. ಈ ವೇಳೆ ಆಕೆ ವಿಚಲಿತಳಾಗಿದ್ದಳು ಮತ್ತು ತನ್ನ ಇಬ್ಬರು ಸಹೋದ್ಯೋಗಿಗಳ ವಿರುದ್ಧ ದೂರು ಹೇಳಿದ್ದರು ಎಂದು ಅವರು ಆರೋಪಿಸಿದ್ದರು.

ಹರಿಯಾಣದ ಹಿಸಾರ್ ಮೂಲದ ಸೋನಾಲಿ ಫೋಗಟ್ ಅವರು ಟಿಕ್ ಟಾಕ್‌ನಲ್ಲಿ ಖ್ಯಾತಿ ಗಳಿಸಿದ್ದರು.

ಅವರು ಮಂಗಳವಾರ ಬೆಳಿಗ್ಗೆ ಉತ್ತರ ಗೋವಾ ಜಿಲ್ಲೆಯ ಅಂಜುನಾ ಪ್ರದೇಶದ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮೊದಲು ತಿಳಿಸಿದ್ದರು. ಇದೀಗ ಗೋವಾ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸದ್ಯ ಮೃತದೇಹವನ್ನು ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸೋನಾಲಿ ಫೋಗಟ್ ಅವರ 15 ವರ್ಷದ ಮಗಳು ಯಶೋಧರ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಶೋನಾಲಿ ಫೋಗಟ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರಿಯಾಣದ ಆದಂಪುರ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್‌ ಪಡೆದು ಕುಲದೀಪ್ ಬಿಷ್ಣೋಯ್ ವಿರುದ್ಧ ಸ್ಪರ್ಧಿಸಿದ್ದರು. ಅವರು 2020 ರಲ್ಲಿ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಕೂಡ ಕಾಣಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com