ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯನ್ನು ಖಂಡಿಸಿದ ಭಾರತ

ಖ್ಯಾತ ಲೇಖಕ ಸಲ್ಮಾನ್ ರಶ್ದಿ  ಅವರ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಭಾರತ ಗುರುವಾರ ತನ್ನ ಮೊದಲ ಪ್ರತಿಕ್ರಿಯೆಯಾಗಿ 'ಭಯಾನಕ ದಾಳಿ'ಯನ್ನು ಖಂಡಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.
ಲೇಖಕ ಸಲ್ಮಾನ್ ರಶ್ದಿ (ಸಂಗ್ರಹ ಚಿತ್ರ)
ಲೇಖಕ ಸಲ್ಮಾನ್ ರಶ್ದಿ (ಸಂಗ್ರಹ ಚಿತ್ರ)

ನವದೆಹಲಿ:  ಖ್ಯಾತ ಲೇಖಕ ಸಲ್ಮಾನ್ ರಶ್ದಿ  ಅವರ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಭಾರತ ಗುರುವಾರ ತನ್ನ ಮೊದಲ ಪ್ರತಿಕ್ರಿಯೆಯಾಗಿ 'ಭಯಾನಕ ದಾಳಿ'ಯನ್ನು ಖಂಡಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

ಆಗಸ್ಟ್ 12 ರಂದು ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಶನ್‌ನಲ್ಲಿ ಉಪನ್ಯಾಸ ನೀಡಲು ಹೋಗಿದ್ದ ರಶ್ದಿ ಅವರ ಕುತ್ತಿಗೆ ಮತ್ತು ಮುಂಡಕ್ಕೆ ದುಷ್ಕರ್ಮಿಗಳು ಇರಿದಿದ್ದರು.

'ಭಾರತವು ಯಾವಾಗಲೂ ಹಿಂಸೆ ಮತ್ತು ಉಗ್ರವಾದದ ವಿರುದ್ಧ ನಿಂತಿದೆ. ನಾವು ಸಲ್ಮಾನ್ ರಶ್ದಿ ಅವರ ಮೇಲಿನ ಭೀಕರ ದಾಳಿಯನ್ನು ಖಂಡಿಸುತ್ತೇವೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಮ್ಮ ವಾರದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್ ನಲ್ಲಿ ಉಪನ್ಯಾಸ ಮಾಡುತ್ತಿರುವಾಗ ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಹಾದಿ ಮತರ್ ಎಂಬ 24 ವರ್ಷದ ಯುವಕ ರಶ್ದಿ ಮೇಲೆ ದಾಳಿ ನಡೆಸಿದ್ದನು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com