ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 10,256 ಸೋಂಕು ಪ್ರಕರಣ ಪತ್ತೆ, 68 ಮಂದಿ ಸಾವು

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,256 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 10,256 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 

ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 24 ಗಂಟೆಗಳಲ್ಲಿ ದೇಶದಾದ್ಯಂತ 10,256 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 4,43,89,176ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ 68 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 29 ಸಾವುಗಳು ವರದಿಯಾಗಿದೆ.

ಮಹಾರಾಷ್ಟ್ರದಿಂದ ಆರು, ರಾಜಸ್ಥಾನ ಮತ್ತು ದೆಹಲಿಯಿಂದ ತಲಾ ನಾಲ್ಕು, ಛತ್ತೀಸ್‌ಗಢ ಮತ್ತು ಕರ್ನಾಟಕದಿಂದ ತಲಾ ಮೂರು, ಜಮ್ಮು ಮತ್ತು ಕಾಶ್ಮೀರ, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 5,27,556ಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 13,528 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 90,707ಕ್ಕೆ ಏರಿಕೆಯಾಗಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 2.43ಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕಿತರ ಪ್ರಮಾಣದ 0.20% ಅನ್ನು ಒಳಗೊಂಡಿದ್ದು, ಚೇತರಿಕೆ ದರವು 98.61% ಕ್ಕೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದುವರೆಗೆ ಒಟ್ಟು 88.43 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 4,22,322 ಪರೀಕ್ಷೆಗಳನ್ನು ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com