ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು: ಸಚಿನ್ ಪೈಲಟ್

ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಶನಿವಾರ ಹೇಳಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್

ನವದೆಹಲಿ: ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಶನಿವಾರ ಹೇಳಿದ್ದಾರೆ. 2014ರ ಲೋಕಸಭಾ ಚುನಾವಣಾ ಸೋಲಿಗೆ ರಾಹುಲ್ ಗಾಂಧಿ ಅವರನ್ನು ಗುಲಾಮ್ ನಬಿ ಆಜಾದ್ ದೂಷಿಸಿದ ಬೆನ್ನಲ್ಲೇ, ಸಚಿನ್ ಪೈಲಟ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಡಲು ಪಕ್ಷ ತಯಾರಿ ನಡೆಸುತ್ತಿರುವಾಗ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ತನ್ನ ಜವಾಬ್ದಾರಿಯನ್ನು ಪೂರೈಸದಿರುವಾಗ ಆಜಾದ್ ಅವರ ಪತ್ರ ತುಂಬಾ ದುರದೃಷ್ಟಕರ ಎಂದು ಪೈಲಟ್ ಹೇಳಿದ್ದಾರೆ.

ಇದನ್ನೂ ಓದಿ: 'ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು, ಆತ್ಮಾವಲೋಕನದ ಅಗತ್ಯವಿತ್ತು': ಮನೀಶ್ ತಿವಾರಿ
 
ಆಜಾದ್ 50 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಮತ್ತು ಈಗ, ದೇಶ ಮತ್ತು ಪಕ್ಷವು ಜನರ ಸಮಸ್ಯೆಗಳನ್ನು ಎತ್ತುವ ಅವಶ್ಯಕತೆಯಿರುವಾಗ ಈ ರೀತಿ ಮಾಡಬಾರದಿತ್ತು. 2014ರ ಲೋಕಸಭಾ ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡುವುದು ತಪ್ಪು ಎಂದಿದ್ದಾರೆ.

ಆಜಾದ್ ಅವರ ಪತ್ರ ರಾಹುಲ್ ಗಾಂಧಿ ಅವರ ವೈಯಕ್ತಿಕ ನಿಂದನೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಪೈಲಟ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com