ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಜೆಎಂಎಂ- ಕಾಂಗ್ರೆಸ್ ಶಾಸಕರ ಸ್ಥಳಾಂತರ

ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.
ಶಾಸಕರನ್ನು ಕರೆದೊಯ್ಯುತ್ತಿರುವ ಬಸ್ ಗಳು
ಶಾಸಕರನ್ನು ಕರೆದೊಯ್ಯುತ್ತಿರುವ ಬಸ್ ಗಳು

ರಾಂಚಿ: ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.

ಸಭೆ ನಂತರ ರಾಂಚಿಯಲ್ಲಿರುವ ಸೊರೆನ್ ಅವರ ನಿವಾಸದಿಂದ ಎರಡು ಬಸ್ ಗಳಲ್ಲಿ ಜಾರ್ಖಂಡ್ ಶಾಸಕರನ್ನು ಕರೆದೊಯ್ಯಲಾಗಿದೆ. ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ಶಾಸಕರನ್ನು ಬೇರೆಡೆಗೆ ಸ್ಥಳಾಂತರಿಸಿವೆ.

ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅನರ್ಹತೆ ಭೀತಿ ಎದುರಿಸುತ್ತಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. 

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಡಳಿತರೂಢ ಪಕ್ಷಗಳ ಶಾಸಕರ ಸಂಖ್ಯೆಯನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ರಾಜಕೀಯ ಅಗತ್ಯವಿದೆ ಎಂದು ಪಕ್ಷದ ಮೂಲಗಳು ಸಮರ್ಥಿಸಿಕೊಂಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com