ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಅಧ್ಯಕ್ಷೀಯ ಚುನಾವಣೆ ದಿನಾಂಕ ನಿಗದಿ ಸಾಧ್ಯತೆ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ಮಧ್ಯಾಹ್ನ ನಡೆಯಲಿದ್ದು, ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಚರ್ಚಿಸಿ, ಚುನಾವಣೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ
ಸೋನಿಯಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ಸೋನಿಯಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ಮಧ್ಯಾಹ್ನ ನಡೆಯಲಿದ್ದು, ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಚರ್ಚಿಸಿ, ಚುನಾವಣೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ 3-30ಕ್ಕೆ ವರ್ಚುಯಲ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಸ್ಪರ್ಧಿಸಲು ನಿರಾಸಕ್ತಿ ತೋರುತ್ತಿರುವುದರಿಂದ ಈ ಚುನಾವಣೆ ಕಾಂಗ್ರೆಸ್ ಗೆ ಪ್ರಮುಖ ಸವಾಲು ಆಗಿದೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ ಕಾಂಗ್ರೆಸ್ ಪಕ್ಷ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಗಸ್ಟ್ 21  ಮತ್ತು ಸೆಪ್ಟೆಂಬರ್ 20 ರ ನಡುವೆ ಅಧ್ಯಕ್ಷರ ಸ್ಥಾನದ ಚುನಾವಣೆ ನಡೆಸಲಾಗುವುದು ಎಂದು ಪಕ್ಷ ಘೋಷಿಸಿದೆ. ಆದರೆ, ಅನೇಕ ಪ್ರಯತ್ನಗಳ ಹೊರತಾಗಿಯೂ ರಾಹುಲ್ ಗಾಂಧಿ ಈವರೆಗೂ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com