ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 9,436 ಹೊಸ ಪ್ರಕರಣ ಪತ್ತೆ, 30 ಸೋಂಕಿತರು ಸಾವು

ದೇಶದಲ್ಲಿ ಕೊರೋನಾ  ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೊರೋನಾ  ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 9,436 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 4,44,08,132ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 86,591ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 30 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.19ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.62ರಷ್ಟಿದೆ. ಈವರೆಗೆ 4,37,93,787 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.93ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ಇನ್ನು ವಾರದ ಪಾಸಿಟಿವಿಟಿ ದರ 2.70 ರಷ್ಟಿದೆ.ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 211.66 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ವಿಚರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com