ಉತ್ತರ ಪ್ರದೇಶದಲ್ಲಿ 15 ವರ್ಷದ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ತಂದೆ-ಮಗನ ಬಂಧನ!

ಬರೇಲಿಯ ಹಳ್ಳಿಯೊಂದರಲ್ಲಿ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಶನಿವಾರ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬರೇಲಿ: ಇಲ್ಲಿನ ಹಳ್ಳಿಯೊಂದರಲ್ಲಿ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಶನಿವಾರ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಐದು ವರ್ಷದ ಬಾಲಕಿಯನ್ನು ಬರ್ಫಿ ನೀಡುವ ಆಮಿಷವೊಡ್ಡಿ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ತಂದೆಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಗರದ ಹೆಚ್ಚುವರಿ ಎಸ್ಪಿ ರಾಹುಲ್ ಭಾಟಿ, ಆರೋಪಿಗಳ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

'ಸಂತ್ರಸ್ತೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆಯ ಕುಟುಂಬ ಸದಸ್ಯರು ಆರೋಪಿ ಮನೆಗೆ ತೆರಳಿದಾಗ, ಆರೋಪಿಯ ತಂದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಕ್ಯಾಂಟ್‌ನ ಇನ್ಸ್‌ಪೆಕ್ಟರ್ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com