ನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ: ಮಮತಾ ಬ್ಯಾನರ್ಜಿ

'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು (ಕೇಂದ್ರ) ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯಗಳ (ಇ.ಡಿ) ದಾಳಿಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ವಾಗ್ದಾಳಿ ನಡೆಸಿದ್ದು, ಬಂಗಾಳದಲ್ಲಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಪಕ್ಷದ ವಿದ್ಯಾರ್ಥಿ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಬಂಗಾಳದಲ್ಲಿ ಸಿಬಿಐ, ಇ.ಡಿ ಮತ್ತು ಇತರ ಕೇಂದ್ರದ ಅಧಿಕಾರಿಗಳ ವಿರುದ್ಧವೂ ನನ್ನ ಬಳಿ ಪ್ರಕರಣಗಳಿವೆ. ಹೀಗಾಗಿ, ನೀವು ನನ್ನ ಅಧಿಕಾರಿಗಳನ್ನು ದೆಹಲಿಗೆ ಕರೆದರೆ, ನಾನು ನಿಮ್ಮ ಅಧಿಕಾರಿಗಳನ್ನು ಇಲ್ಲಿಗೆ ಕರೆಸುತ್ತೇನೆ' ಎಂದು ಹೇಳಿದರು.

'ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಕನಿಷ್ಠ ಎಂಟು ಪ್ರಕರಣಗಳಿವೆ. ಅವರು (ಕೇಂದ್ರ) ಸಿಬಿಐ ಮೂಲಕ ನಮ್ಮ ಜನರನ್ನು ಬಂಧಿಸಿದ್ದಾರೆ. ಇದನ್ನು ನಾನು ಗಮನಿಸುತ್ತಿದ್ದೇನೆ' ಎಂದು ಮುಖ್ಯಮಂತ್ರಿ ಹೇಳಿದರು.

ಈ ಹಿಂದೆ ಗುಜರಾತ್ ಸರ್ಕಾರ ಬಿಡುಗಡೆ ಮಾಡಿರುವ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲು ಕೋಲ್ಕತ್ತಾದಲ್ಲಿ ಟಿಎಂಸಿ 48 ಗಂಟೆಗಳ ಸುದೀರ್ಘ ಧರಣಿಯನ್ನು ಆಯೋಜಿಸಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com