ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು; ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಕ್ಷರ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದೆ. 
ಕಾಂಗ್ರೆಸ್ ಧ್ವಜ
ಕಾಂಗ್ರೆಸ್ ಧ್ವಜ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಕ್ಷರ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದೆ. 

ಮೂಲಗಳ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವ ಬಗ್ಗೆ ಶಶಿ ತರೂರ್ ಇನ್ನಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಶಶಿ ತರೂರ್ ಸ್ಪರ್ಧಿಸುವ ಬಗ್ಗೆ ಊಹಾಪೋಹಗಳ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್, ನಮಗೆ ಅಂಥಹ ಯಾವುದೇ ಮಾಹಿತಿಯೂ ಇಲ್ಲ. ಆದರೆ ನಾವು ನಮ್ಮ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು ನಾಮಪತ್ರ ಸಲ್ಲಿಕೆ, ಮತ ಎಣಿಕೆ, ಫಲಿತಾಂಶದ ದಿನಾಂಕಗಳನ್ನು ಘೋಷಣೆ ಮಾಡಿದ್ದೇವೆ. ಆದ್ದರಿಂದ ಯಾರಾದರೂ ಸ್ಪರ್ಧಿಸಬಹುದು. ಇದಕ್ಕಿಂತಲೂ ಹೆಚ್ಚು ಏನನ್ನೂ ಹೇಳುವುದಿಲ್ಲ, ಕಾಂಗ್ರೆಸ್ ನ ಸಂವಿಧಾನವಿದೆ, ದಿನಾಂಕಗಳಿವೆ ಯಾರಿಗೆ ಯಾವುದು ಸೂಕ್ತವೋ ಅದನ್ನು ಮಾಡಲಿ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ನೇಮಕಾತಿ ವಿಷಯದಲ್ಲಿ ಎಲ್ಲವೂ ಮೋದಿ, ಅಮಿತ್ ಶಾ ಅವರ ಮೇಲೆಯೇ ಅವಲಂಬಿತವಾಗಿರುತ್ತದೆ ಎಂದು ಆರೋಪಿಸಿರುವ ಗೌರವ್ ವಲ್ಲಭ್, ಕಾಂಗ್ರೆಸ್ ನಲ್ಲಿ 1.5 ಮಂದಿ 0.5 ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಸ್ಕೃತಿ ಇಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com