ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್

ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಭಿಷೇಕ್ ಬ್ಯಾನರ್ಜಿ
ಅಭಿಷೇಕ್ ಬ್ಯಾನರ್ಜಿ

ಕೋಲ್ಕತ್ತಾ: ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಬ್ಯಾನರ್ಜಿ ಅವರನ್ನು ಶುಕ್ರವಾರ ಬೆಳಿಗ್ಗೆ ತನ್ನ ಕೋಲ್ಕತ್ತಾ ಕಚೇರಿಗೆ ಹಾಜರಾಗುವಂತೆ ಕೇಂದ್ರೀಯ ಸಂಸ್ಥೆ ಹೇಳಿದೆ.

'ನಾವು ಅಭಿಷೇಕ್ ಬ್ಯಾನರ್ಜಿ ಅವರನ್ನು ಇಲ್ಲಿ ನಮ್ಮ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಕರೆದಿದ್ದೇವೆ. ದೆಹಲಿಯಿಂದ ನಮ್ಮ ಅಧಿಕಾರಿಗಳು ಅವರನ್ನು ವಿಚಾರಣೆ ಮಾಡಲು ಬರುತ್ತಾರೆ' ಎಂದು ಹಿರಿಯ ಇ.ಡಿ ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ, ಪಕ್ಷದ ಎರಡನೇ ಸ್ಥಾನದಲ್ಲಿರುವ ತಮ್ಮ ಸೋದರಳಿಯ ಮತ್ತು ಇತರ ಹಿರಿಯ ನಾಯಕರಿಗೆ ಕೇಂದ್ರೀಯ ಸಂಸ್ಥೆಗಳು ನೋಟಿಸ್ ಕಳುಹಿಸಬಹುದು ಎಂದು ಸೋಮವಾರ ಆತಂಕ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com