ಮಧ್ಯ ಪ್ರದೇಶ: ಆಂಬ್ಯುಲೆನ್ಸ್‌ ಸಿಗದೆ ಗರ್ಭಿಣಿ ಪತ್ನಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಪತಿ, ವಿಡಿಯೋ ವೈರಲ್

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ ಕೊರತೆಯಿಂದಾಗಿ ಗರ್ಭಿಣಿ ಮಹಿಳೆಯನ್ನು ತಳ್ಳುವ ಗಾಡಿಯಲ್ಲಿ ಪತಿ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಗರ್ಭಿಣಿ ಪತ್ನಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಪತಿ
ಗರ್ಭಿಣಿ ಪತ್ನಿಯನ್ನು ತಳ್ಳು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಪತಿ

ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ ಕೊರತೆಯಿಂದಾಗಿ ಗರ್ಭಿಣಿ ಮಹಿಳೆಯನ್ನು ತಳ್ಳುವ ಗಾಡಿಯಲ್ಲಿ ಪತಿ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ತಳ್ಳು ಗಾಡಿಯಲ್ಲಿ ಒಂದು ಕಿಮೀ ಸಾಗಿದ ನಂತರ ಕೈಲಾಶ್ ಅಹಿರ್ವಾಲ್ ಅವರು ತಮ್ಮ ಪತ್ನಿಯನ್ನು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರ ತಲುಪಿದ್ದಾರೆ. ಆದರೆ ಅಲ್ಲಿ ವೈದ್ಯರು ಅಥವಾ ನರ್ಸ್ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಮಂಗಳವಾರ ದಾಮೋಹ್ ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿರುವ ರಾಣೆಹ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಹಿರ್ವಾಲ್ ತನ್ನ ಪತ್ನಿಯನ್ನು ತಳ್ಳುವ ಗಾಡಿಯಲ್ಲಿ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋ ಗಮನಿಸಿದ ಹಟ್ಟಾ ಬ್ಲಾಕ್ ಮೆಡಿಕಲ್ ಆಫೀಸರ್ ಆರ್ ಪಿ ಕೋರಿ ಅವರು, ಈ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಏಕೆ ನೀಡಲಿಲ್ಲ ಎಂದು ಸಂಬಂಧಿಸಿದ ನೌಕರರಿಗೆ ನೋಟಿಸ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ನಂತರ 108 ಸರ್ಕಾರಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿದೆ. ಆದರೆ ಎರಡು ಗಂಟೆಗಳ ಕಾಲ ಯಾವುದೇ ಆಂಬ್ಯುಲೆನ್ಸ್ ಬರಲಿಲ್ಲ. ನಂತರ ಆಕೆಯನ್ನು ತಳ್ಳುವ ಗಾಡಿಯಲ್ಲಿ ಕೂರಿಸಿ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಅಲ್ಲಿ ಯಾವುದೇ ನರ್ಸ್ ಅಥವಾ ವೈದ್ಯರು ಇರಲಿಲ್ಲ ಎಂದು  ಕೈಲಾಶ್ ಅಹಿರ್ವಾಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com