ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ದುಷ್ಕರ್ಮಿಗಳಿಂದ ದಾಳಿ

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಬಿಜೆಪಿ ಅಭ್ಯರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಪಿಯೂಷ್ ಪಟೇಲ್
ಪಿಯೂಷ್ ಪಟೇಲ್
Updated on

ಗುಜರಾತ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಬಿಜೆಪಿ ಅಭ್ಯರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ವನಸ್ಡಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಯೂಷ್ ಪಟೇಲ್ ಕಳೆದ ರಾತ್ರಿ ಪ್ರತಾಪನಗರದಿಂದ ವಂಡರ್ವೇಲಾ ಕಡೆಗೆ ತೆರಳುತ್ತಿದ್ದಾಗ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ.

ದುಷ್ಕರ್ಮಿಗಳು ಪಿಯೂಷ್ ಪಟೇಲ್ ಅವರ ಕಾರಿನ ಗಾಜು ಒಡೆದು ಹಾಕಿದ್ದು, ದಾಳಿಯಿಂದಾಗಿ ಪಟೇಲ್ ಅವರ ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಮತದಾನಕ್ಕೂ ಮುನ್ನ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನಂತ್ ಪಟೇಲ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆಯ ನಂತರ ವನಸ್ಡಾ ಪೊಲೀಸ್ ಠಾಣೆಯ ಹೊರಗೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com