ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸ್ಥಗಿತ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

1-8  ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: 1-8 ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಬಡ ವಿದ್ಯಾರ್ಥಿಗಳಿಂದ ಪ್ರಧಾನಿ ಮೋದಿ ಸರ್ಕಾರ ಹಣವನ್ನು ಕಸಿದುಕೊಂಡಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
 
ನ.29 ರಂದು ಸರ್ಕಾರ 9-10  ನೇ ತರಗತಿಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನ ಯೋಜನೆಯನ್ನು ಸೀಮಿತಗೊಳಿಸಿತ್ತು. 8 ನೇ ತರಗತಿವರೆಗೆ ಶಿಕ್ಷಣದ ಹಕ್ಕು ಕಾಯ್ದೆ ಅನ್ವಯಿಸುತ್ತದೆ ಆದ್ದರಿಂದ ವಿದ್ಯಾರ್ಥಿ ವೇತನವನ್ನು ಆ ವರ್ಗಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿತ್ತು.

ಪ್ರಧಾನಿ ಮೋದಿ ಅವರೆ, ನಿಮ್ಮ ಸರ್ಕಾರ ಎಸ್ ಸಿ, ಎಸ್ ಟಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯದ 1-8 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೀ ಮೆಟ್ರಿಕ್ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿದೆ. ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಕಸಿದುಕೊಳ್ಳುವುದೇಕೆ? ಈ ರೀತಿ ಬಡ ವಿದ್ಯಾರ್ಥಿಗಳಿಂದ ಕಸಿದುಕೊಳ್ಳುವ ಹಣದಿಂದ ನಿಮ್ಮ ಸರ್ಕಾರ ಎಷ್ಟು ಹಣವನ್ನು ಉಳಿಸುತ್ತದೆ, ಅಥವಾ ಗಳಿಸುತ್ತದೆ? ಎಂದು ಖರ್ಗೆ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಹಾಗೂ ಬಿಎಸ್ ಪಿ ಪಕ್ಷಗಳು ಸರ್ಕಾರ ಬಡವರ ವಿರುದ್ಧವಾಗಿದೆ ಎಂದು ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com