ಗುಜರಾತ್ ಚುನಾವಣೆ: ದಲಿತರಿಗೆ, ಹಿಂದುಳಿದವರಿಗೆ ಹೋಗುತ್ತದೆ ಎಂದು ಸರ್ಕಾರ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ- ಖರ್ಗೆ ಆರೋಪ

ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಅಹ್ಮದಾಬಾದ್: ಗುಜರಾತ್ ನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.
 
ಹುದ್ದೆಗಳನ್ನು ಭರ್ತಿ ಮಾಡಿದರೆ 5 ಲಕ್ಷ ಉದ್ಯೋಗಗಳ ಪೈಕಿ ಅರ್ಧದಷ್ಟು ಉದ್ಯೋಗಗಳು ದಲಿತ, ಬುಡಕಟ್ಟು, ಹಿಂದುಳಿದ ಸಮುದಾಯಗಳಿಗೆ ಹೋಗುತ್ತವೆ. ಆದ್ದರಿಂದ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.

ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಖರ್ಗೆ, ಬಿಜೆಪಿ ಆಡಳಿತವಿರುವ ಈ ರಾಜ್ಯದಲ್ಲಿ ದಲಿತರು, ಹಿಂದುಳಿದವರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.17 ರಷ್ಟು ಏರಿಕೆ ಕಂಡಿದೆ ಎಂದು ಆರೋಪಿಸಿದ್ದಾರೆ. 

ಗುಜರಾತ್ ನಲ್ಲಿ ಡಿ.05 ರಂದು 2 ನೇ ಹಂತದ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸ್ಥಳೀಯ ನಾಯಕರು ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಆದರೆ 6 ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾಗಿದ್ದು, ಇಂಜಿನ್ ಯಾಕೆ ವಿಫಲವಾಯಿತು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಗುಜರಾತ್ ನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರಚಾರಕ್ಕೆ ಪಕ್ಷದ 5 ಮುಖ್ಯಮಂತ್ರಿಗಳು, 40 ಕೇಂದ್ರ ಸಚಿವರು, 150 ಸಚಿವರ ಸೇನೆಯನ್ನು ನೆರೆ ರಾಜ್ಯಗಳಿಂದ ಕರೆದುಕೊಂಡುಬಂದಿದೆ ಎಂದು ಖರ್ಗೆ ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com